KANNADA

ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ.. ಟಿಕೆಟ್​​ ದರ 15% - 20% ರಷ್ಟು ಹೆಚ್ಚಳ!

ಬೆಂಗಳೂರು: ರಾಜ್ಯದ ಜನತೆಗೆ ಬಸ್‌ ಟಿಕೆಟ್‌ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್‌ ಎದುರಾಗಿದೆ. ಸರ್ಕಾರ ಒಂದಾದ ನಂತರ ಒಂದರ ಬೆಲೆ ಏರಿಕೆ ಮಾಡುತ್ತಿದ್ದು ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಹಾಕುತ್ತಿದೆ. ಈಗಾಗಲೇ ಕೆಎಸ್ಆರ್ ಸಿಟಿ, ಬಿಎಂಟಿಸಿ ಬಸ್ ದರ ಏರಿಕೆ ಆಗಿದೆ. ಈ ಬೆನ್ನಲ್ಲೇ ಬೆಂಗಳೂರು ಜನತೆಗೆ ನಮ್ಮ ಮೆಟ್ರೋ ಶಾಕ್ ನೀಡಲು ತಯಾರಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಪ್ರಯಾಣದರ ಹೆಚ್ಚಿಸಲು ಸಕಲ ಸಿದ್ಧತೆ ನಡೆಸಿದೆ. ನಮ್ಮ ಮೆಟ್ರೋ ಅಂತಿಮ ವರದಿ ಕುರಿತು ಸಮಾಲೋಚನೆ ನಡೆಸಲಿದೆ. ಶೇಕಡಾ 15ರಿಂದ 20ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಇದೆ. ಜನವರಿ 17ಕ್ಕೆ ದರ ಪರಿಷ್ಕರಣೆ ಸಮಿತಿ ಸಲ್ಲಿಸಿರುವ ಅಂತಿಮ ವರದಿ ಕುರಿತು ಸಮಾಲೋಚನೆ ನಡೆಯಲಿದೆ. ಜನವರಿ‌ 17ರ ಬಿಎಂಆರ್‌ಸಿಲ್ ಮಂಡಳಿ ಸಭೆಯಲ್ಲಿ ಅಂತಿಮ‌ ನಿರ್ಧಾರ ಪ್ರಕಟವಾಗಲಿದೆ. ಸಭೆಯ ವರದಿಯನ್ನು ಅಂತಿಮವಾಗಿ ಸರ್ಕಾರ ಸಲ್ಲಿಸಲು ಬಿಎಂಆರ್‌ಸಿಲ್ ನಿರ್ಧಾರ ಮಾಡಿದೆ. 2017ರಲ್ಲಿ ಕೊನೆಯ ಬಾರಿಗೆ ಮೆಟ್ರೋ ಪ್ರಯಾಣ ದರ ಏರಿಕೆಯಾಗಿತ್ತು. ಏಳು ವರ್ಷಗಳಿಂದ‌ ಮೆಟ್ರೋ ಪ್ರಯಾಣ ದರ ಏರಿಕೆಯಾಗದ ಹಿನ್ನೆಲೆ ಈ ಕ್ರಮಕ್ಕೆ ಮುಂದಾಗಿದೆ. 2017 ರಲ್ಲಿ‌ ಶೇಕಾಡ 10- 15ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಇದನ್ನೂ ಓದಿ: ಬಾಲಿವುಡ್ ಹಾಡಿಗೆ ಪಾಕ್ ನಟಿಯ ಚಿಂದಿ ಡ್ಯಾನ್ಸ್ ವಿಡಿಯೋ ವೈರಲ್... ನಮ್ಮ ಮೆಟ್ರೋ ರೈಲು ಮುಂದಿನ ಐದು ವರ್ಷದಲ್ಲಿ 220 ಕಿಮೀ ನಷ್ಟು ವಿಸ್ತರಣೆ ಹೊಂದಲಿರುವ ಹಿನ್ನೆಲೆ ಮೆಟ್ರೋ ಕಾಮಗಾರಿಗಾಗಿ ವಿವಿಧ ಬ್ಯಾಂಕ್, ಏಜೆನ್ಸಿಗಳಿಗೆ ಪಾವತಿಸಬೇಕಾದ ಸಾಲದ ಮೇಲಿನ ಬಡ್ಡಿ, ಪ್ರಸ್ತುತ ರೈಲುಗಳ ಕಾರ್ಯಾ ಚರಣೆ ವೆಚ್ಚ, ನಿರ್ವಹಣೆ ಮತ್ತು ಸಿಬ್ಬಂದಿ ವೇತನ ಮತ್ತಿತರ ವಿವಿಧ ವೆಚ್ಚ ಪ್ರತಿ ವರ್ಷ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಶೇ. 15-20 ರಷ್ಟು ದರ ಏರಿಕೆ ಅನಿವಾರ್ಯ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಸ್ತುತ ದರಗಳು ಒಂದು ನಿಲ್ದಾಣದಿಂದ ಮತ್ತೊಂದು ನಿಲ್ದಾಣಕ್ಕೆ ಕನಿಷ್ಠ ದರ ₹10, ಗರಿಷ್ಠ ದರ ₹60 ರೂಪಾಯಿವರೆಗೆ ಇದೆ. ಜತೆಗೆ ಸ್ಮಾರ್ಟ್ ಕಾರ್ಡ್‌ಗಳು ಮತ್ತು ಕ್ಯೂಆರ್‌ಕೋಡ್ ಟಿಕೆಟ್ ಸಹ ಲಭ್ಯವಿದೆ. ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ಸಹ ತನ್ನ ವರದಿ ನೀಡಿದೆ. ಜನವರಿ 17ರಂದು ಬಿಎಂಆರ್‌ಸಿಎಲ್ ಬೋರ್ಡ್ ಮೀಟಿಂಗ್ ನಲ್ಲಿ ಈ ಬಗ್ಗೆ ಸಹ ಚರ್ಚೆ ನಡೆಯಲಿದೆ. ಶೇಕಾಡ ದರ ಎಷ್ಟು ಹೆಚ್ಚಿಸಬೇಕು, ಸಾಧಕ, ಬಾಧಕಗಳೇನು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಚರ್ಚೆ ಬಳಿಕ ಅಂತಿಮ‌ ನಿರ್ಧಾರದ ವರದಿಯನ್ನು ಸರ್ಕಾರಕ್ಕೆ ಬಿಎಂಆರ್ ಸಿಎಲ್ ಸಲ್ಲಿಸಲಿದೆ. ಸರ್ಕಾರದ ಗ್ರೀನ್ ಸಿಗ್ನಲ್ ಬಳಿಕ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಲಿದೆ. ಇದನ್ನೂ ಓದಿ: ಮಧುಗಿರಿ ಡಿವೈಎಸ್ಪಿ ವಿರುದ್ದ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - ಸಬ್ ಸ್ಕ್ರೈಬ್ಆಗಿರಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.