KANNADA

60% ಕಮಿಷನ್ ಸುಲಿಗೆ ಆರೋಪ ಪುನರುಚ್ಛರಿಸಿದ ಹೆಚ್‌ಡಿಕೆ: ದಾಖಲೆ ಕೊಡಿ ಎಂದ ಸಿಎಂ ವಿರುದ್ಧ ಕೇಂದ್ರ ಸಚಿವರ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಗುತ್ತಿಗೆದಾರರಿಂದ 60% ಕಮೀಶನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇದು ತರಕಾರಿಯಲ್ಲ, ಸಂಜೀವಿನಿ!ಮಧುಮೇಹದಿಂದ ಕ್ಯಾನ್ಸರ್ ವರೆಗೆ ಮುಕ್ತಿ ನೀಡಬಲ್ಲ ಪರಮೌಷಧ! ವರ್ಷದಲ್ಲಿ ಮೂರೇ ತಿಂಗಳು ಸಿಗುವ ಕಾಯಿ ಇದು ! ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವರು; 60% ಕಮಿಷನ್, ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ. ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅವರು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮಿಷನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ ಎಂದು ಸಚಿವರು ಟಾಂಗ್ ನೀಡಿದ್ದಾರೆ. ಕಮಿಷನ್ ವ್ಯವಹಾರ ಇಲ್ಲ ಎಂದಾದರೆ, 'ಯಾಕಪ್ಪಾ ಹಾಗೆ ಹೇಳಿದಿರಿ?' ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮಿಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಖಾರವಾಗಿ ಕೇಳಿದ್ದಾರೆ. ಇದನ್ನೂ ಓದಿ: ಡೈ ಮಾಡುವುದು ಬೇಕಿಲ್ಲ..! ಕೇವಲ ಎರಡು ವಾರ ಈ ಎಣ್ಣೆ ಬಳಸಿದರೆ ಬೆಳ್ಳಗಾಗಿರುವ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತೆ...! ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮಿಷನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ ಎಂದು ಒತ್ತಾಯಿಸಿರುವ ಕೇಂದ್ರ ಸಚಿವರು; 60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!! ಎಂದು ತಮ್ಮನ್ನು ಹಿಟ್ ಅಂಡ್ ರನ್ ಎನ್ನುತ್ತಿದ್ದ ಸಿಎಂಗೆ ಚಾಟಿ ಬೀಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.