KANNADA

ರಾಜ್ಯದಲ್ಲಿ HMPV ವೈರಸ್ ಪತ್ತೆ; ಸೋಂಕು ಹರಡದಂತೆ ಸರ್ಕಾರದಿಂದ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ HMPV ವೈರಸ್‌ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇದನ್ನೂ ಓದಿ: ಟೀಂ ಇಂಡಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಸೋತಿದ್ದು ಈ 4 ಪ್ರಮುಖ ಕಾರಣಗಳಿಂದ! ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೀನಾ ದೇಶದಲ್ಲಿ HMPV ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನಃ ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ನಕ್ಸಲರು ಶರಣಾಗುವ ಸಾಧ್ಯತೆ: ನಕ್ಸಲರ ಶರಣಾಗತಿಗೆ ಸರ್ಕಾರ ಸಿದ್ಧವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಲಿ ಎಂದು ಕರೆ ನೀಡಿದ್ದೇನೆ ಹಾಗೂ ನಕ್ಸಲರ ಮನ:ಪರಿವರ್ತನೆಯಾಗಿ ಶರಣಾಗುವ ಸಾಧ್ಯತೆಯಿದೆ. ಸಮಾಜದ ಮುಖ್ಯವಾಹಿನಿಗೆ ಅವರನ್ನು ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಹುಟ್ಟಿ, ಭಾರತ ತಂಡಕ್ಕಾಗಿ ತನ್ನ ಜೀವನವ್ನೆ ಮುಡಿಪಾಗಿಟ್ಟ ಖ್ಯಾತ ಕ್ರಿಕೆಟಿಗ ಈತ! ಯಾರು ಗೊತ್ತಾ..? ಕೇಂದ್ರ ಸಚಿವ ಹೆಚ್ ಡಿ.ಕುಮಾರಸ್ವಾಮಿಯವರು ರಾಜ್ಯಸರ್ಕಾರದ ಕಮೀಷನ್ ಪ್ರಮಾಣ ಶೇ. 60 ಕ್ಕೆ ತಲುಪಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕಮೀಷನ್ ಆರೋಪವನ್ನು ಗುತ್ತಿಗೆದಾರ ಸಂಘದ ಅಧ್ಯಕ್ಷರು ಕೆಂಪಯ್ಯನವರು ಮಾಡಿದ್ದರು. ಬಿಜೆಪಿಯವರು ಕಮೀಷನ್ ತೆಗೆದುಕೊಂಡಿರುವುದಾಗಿ ಕೆಂಪಯ್ಯನವರು ಆರೋಪಿಸಿದ್ದಾಗಿ ತಿಳಿಸಿದರು, ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.