KANNADA

ಐಎಎಸ್ ಮತ್ತು ಕೆಎಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಐಎಎಸ್ ಮತ್ತು ಕೆಎಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತ ಆಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್‌ನ ಗೆ ಭೇಟಿ ನೀಡಿ ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅಧಿಸೂಚನೆ ಮತ್ತು ವಿವರಗಳಿಗಾಗಿ ವೆಬ್‌ಸೈಟ್ ಗೆ ಭೇಟಿ ನೀಡಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ನಗರದ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ತರಬೇತಿಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲನಾ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.