KANNADA

ಇದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ನಿಮ್ಮ ಬಳಿ ಇದ್ರೆ ಭಾರೀ ದಂಡ, ಜೈಲು ಶಿಕ್ಷೆಗೂ ಗುರಿಯಾಗಬಹುದು...!

SIM Card Rules : ದೂರಸಂಪರ್ಕ ಇಲಾಖೆ ನಿಯಮಗಳ ಪ್ರಕಾರ, ಸಿಮ್ ಕಾರ್ಡ್ ಕೊಳ್ಳಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸುವುದರ ಜೊತೆಗೆ ಒಬ್ಬ ವ್ಯಕ್ತಿ ಎಷ್ಟು ಸಿಮ್ ಕಾರ್ಡ್‌ಗಳನ್ನು ಹೊಂದಿರಬಹುದು ಎಂಬ ಬಗ್ಗೆಯೂ ನಿಯಮಗಳನ್ನು ರೂಪಿಸಲಾಗಿದೆ. ಒಂದೊಮ್ಮೆ ಈ ನಿಯಮಗಳನ್ನು ಉಲ್ಲಂಘಿಸಿದರೆ 50,000 ರೂ.ಗಳಿಂದ 2 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಅಗತ್ಯವಿದ್ದರೆ ಜೈಲು ಶಿಕ್ಷೆಗೂ ಗುರಿ ಮಾಡಬಹುದು. ಹೊಸ ಟೆಲಿಕಾಂ ಆಕ್ಟ್ ಪ್ರಕಾರ, ಒಬ್ಬ ವ್ಯಕ್ತಿ ಎಷ್ಟು ಸಿಮ್ ಕಾರ್ಡ್‌ಗಳನ್ನು ಹೊಂದಬಹುದು. ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳಿವೆ ಎಂದು ತಿಳಿಯುವುದು ಹೇಗೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ... ಸಿಮ್ ಕಾರ್ಡ್ ಮಿತಿ: ಹೊಸ ಟೆಲಿಕಾಂ ಆಕ್ಟ್ ಪ್ರಕಾರ, ಒಬ್ಬ ವ್ಯಕ್ತಿ ಗರಿಷ್ಠ 9 ಸಿಮ್ ಕಾರ್ಡ್‌ ಗಳನ್ನು ಹೊಂದಬಹುದು. ಇದನ್ನೂ ಓದಿ- ಏರ್‌ಟೆಲ್ ನಿಂದ ಹೊಸ ಪ್ಲಾನ್ ಬಿಡುಗಡೆ; ಹೊಸ ವರ್ಷಕ್ಕೆ ಸಿಕ್ತು ಬೊಂಬಾಟ್ ಉಡುಗೊರೆ ಗಮನಾರ್ಹವಾಗಿ, ಒಂಬತ್ತು ಸಿಮ್ ಕಾರ್ಡ್‌ಗಿಂತ ಅಧಿಕ ಸಿಮ್ ಕಾರ್ಡ್ ಅನ್ನು ನೀವು ಖರೀದಿಸದಿದ್ದರೂ, ನಿಮ್ಮ ಹೆಸರಿನಲ್ಲಿ ಬೇರೆಯವರು ಸಿಮ್ ಖರೀದಿಸಿದರೂ ಸಹ ಇದಕ್ಕೆ ನೀವೇ ಜವಾಬ್ದಾರರಾಗಿರುತ್ತೀರಿ. ಟೆಲಿಕಾಂ ಆಕ್ಟ್ 2023ರ ಪ್ರಕಾರ, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಈಶಾನ್ಯದ ಕೆಲವು ರಾಜ್ಯಗಳಲ್ಲಿ ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಕೇವಲ ಆರು ಸಿಮ್ ಕಾರ್ಡ್‌ಗಳನ್ನು ಮಾತ್ರ ಖರೀದಿಸಲು ಅವಕಾಶವಿದೆ. ದಂಡ: ಟೆಲಿಕಾಂ ಆಕ್ಟ್ ನ ಈ ನಿಯಮಗಳನ್ನು ಉಲ್ಲಂಘಿಸಿ ನಿಗದಿತ ಮಿತಿಗಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಬಳಸಿದರೆ ಮೊದಲ ಬಾರಿಗೆ 50,000 ರೂ.ವರೆಗಿನ ದಂಡವನ್ನು ವಿಧಿಸಲಾಗುತ್ತದೆ. ನಂತರ 2 ಲಕ್ಷ ರೂ.ವರೆಗೂ ದಂಡ ವಿಧಿಸುವುದರ ಜೊತೆಗೆ ಜೈಲು ವಾಸವನ್ನೂ ಅನುಭವಿಸಬೇಕಾಬಹುದು. ಇದನ್ನೂ ಓದಿ- Google Top Trending Search: 2024ರಲ್ಲಿ ಜನ ಗೂಗಲ್‌ನಲ್ಲಿ ಹೆಚ್ಚಾಗಿ ಸರ್ಚ್ ಮಾಡಿದ್ದು ಏನನ್ನ ಗೊತ್ತಾ? ಸಿಮ್ ಕಾರ್ಡ್ ಸಂಬಂಧಿತ ಇನ್ನೂ ಹೆಚ್ಚಿನ ಮಾಹಿತಿಗಾಗಿ ಸಂಚಾರ ಸಾಥಿ ಪೋರ್ಟಲ್ ಗೆ ಭೇಟಿ ನೀಡಿ. ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - ಸಬ್ ಸ್ಕ್ರೈಬ್ಆಗಿರಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.