KANNADA

IND vs AUS: ಒಂದೆ ದಿನ ಭಾರತ ತಂಡಕ್ಕೆ ಆಸ್ಟ್ರೇಲಿಯಾ ವಿರುದ್ಧ ಎರಡೆರಡು ಸೋಲು..! ಆಘಾತದಲ್ಲಿ ಟೀಂ ಇಂಡಿಯಾ ಅಭಿಮಾನಿಗಳು..?

AUSW vs INDW: ಭಾನುವಾರ ಟೀಂ ಇಂಡಿಯಾದ ಎರಡೆರಡು ಪಂದ್ಯಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದ ಭಾರತ ತಂಡದ ಅಭಿಮಾನಿಗಳಿಗೆ ಆಘಾತ ಎದುರಾಗಿದೆ. ಒಂದಲ್ಲ ಎರಡು ಪಂದ್ಯಗಳನ್ನು ಸೋಲುವ ಮೂಲಕ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳಿಗೆ ಶಾಕ್‌ ಕೊಟ್ಟಿದ್ದಾರೆ. ಆಸ್ಟ್ರೇಲಿಯಾ ತಂಡದ ವಿರುದ್ಧ ಇಂದು ಮಹಿಳ ಹಾಗೂ ಪುರುಷರ ಎರಡು ಪಂದ್ಯಗಳು ನಡೆದವು, ಇವೆರಡರಲ್ಲಿಯೂ ಟೀಂ ಇಂಡಿಯಾ ಸೋಲು ಅಣುಭವಿಸುವ ಮೂಲಕ ಅಭಿಮಾನಿಗಳಿಗೆ ಶಾಕ್‌ ಕೊಟ್ಟಿದೆ, ಭಾನುವಾರ ಎರೆಡೆರಡು ಪಂದ್ಯಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿ ಕಾದು ಕೂತಿದ್ದ ಭಾರತ ತಂಡದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಬ್ರಿಸ್ಬೇನ್‌ನಲ್ಲಿ ನಡೆದ ಆಸ್ಟ್ರೇಲಿಯಾ ಮಹಿಳೆಯರ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ವನಿತೆಯರ ತಂಡ 122 ರನ್‌ಗಳ ಬೃಹತ್‌ ಅಂತರದಿಂದ ಸೋಲನ್ನು ಅನುಭವಿಸಿದೆ. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ 50 ಓವರ್‌ಗಳಲ್ಲಿ ಎಂಟು ವಿಕೆಟ್‌ ನಷ್ಟಕ್ಕೆ 371 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಬೃಹತ್‌ ಮೊತ್ತವನ್ನು ಬೆನ್ನತ್ತಿದ ಭಾರತ ತಂಡ 44.5 ಓವರ್‌ಗಳಲ್ಲಿ ಕೇವಲ 249 ರನ್‌ಗಳಿಗೆ ಆಲ್‌ ಔಟ್‌ ಆಗುವ ಮೂಲಕ ಬೃಹತ್‌ ಮೊತ್ತದಿಂದ ಸೋಲುಂಡಿದೆ. ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿದ್ದ ಭಾರತ ವನಿತೆಯರ ತಂಡ ಒಂದು ಪಂದ್ಯ ಬಾಕಿ ಇರುವಂತೆಯೇ ಮೂರು ಏಕದಿನ ಸರಣಿಯಲ್ಲಿ ಎರಡು ಪಂದ್ಯಗಳನ್ನು ಸೋಲುವ ಮೂಲಕ, ಸೋಲನ್ನು ಒಪ್ಪಿಕೊಂಡಿದೆ. ಆಸಿಸ್‌ ಮಹಿಳೆಯರ ವಿರುದ್ಧ ಭಾರತ ವನಿತೆಯರು ಎರಡೆರಡು ಪಂದ್ಯಗಳಲ್ಲಿ ಸೋಲನುಭವಿಸಿರುವುದು ಒಂದು ಕಡೆ ಆದರೆ, ಮತ್ತೊಂದೆಡೆ ಐದು ಟೆಸ್ಟ್‌ಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯ ಭಾಗವಾಗಿ ಅಡಿಲೇಡ್‌ನಲ್ಲಿ ನಡೆಯುತ್ತಿರುವ, ಎರಡನೇ ಟೆಸ್ಟ್‌ನಲ್ಲಿ ಭಾರತ ಪುರುಷರ ತಂಡ ಆಸ್ಟ್ರೇಲಿಯಾದ ವಿರುದ್ಧ 10 ವಿಕೆಟ್‌ಗಳ ಸೋಲು ಅನುಭವಿಸಿದೆ. ಒಂದೆ ದಿನದಲ್ಲಿ ಎರಡೆರೆಡು ಪಂದ್ಯಗಳನ್ನು ಸೋತಿರುವ ಭಾರತ ತಂಡ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆಯನ್ನು ಉಂಟು ಮಾಡಿದೆ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.