KANNADA

ಕೇರಳ ಗುಡ್ಡ ಕುಸಿತ ; ಕನ್ನಡಿಗರ ರಕ್ಷಣೆಗೆ ತೆರಳಿದ ಸಚಿವ ಸಂತೋಷ್ ಲಾಡ್

Landslide in Kerala Wayanad: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶ ದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ಇದನ್ನೂ ಓದಿ- Wayanad Landslide: ಸಾವನ್ನಪ್ಪಿದವರ ಸಂಖ್ಯೆ 106ಕ್ಕೇರಿಕೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ! ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ (Minister Santosh Lad) ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದನ್ನೂ ಓದಿ- Kerala Landslide: ಚಾಮರಾಜನಗರದ ಇಬ್ಬರು ಸಾವು, ಇಬ್ಬರು ನಾಪತ್ತೆ, ಓರ್ವನಿಗೆ ಗಾಯ ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ (Protection of Kannadigas) ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ. ದೂರವಾಣಿ ಮೂಲಕ ಕೇರಳ ಸಿಎಂ ಪಿಣರಾಯಿ ವಿಜಯನ್ (Kerala CM Pinarayi Vijayan) ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು. ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಇದೇ ವೇಳೆ ಅವರು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.