ನವದೆಹಲಿ: ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ ಶಿಕ್ಷೆ ವಿಧಿಸಲಿಲ್ಲ. ಸಿ.ಟಿ.ರವಿಯವರು ತಾವು ಆ ರೀತಿ ಹೇಳಿಕೆ ನೀಡಲಿಲ್ಲ ಎಂದು ಬಹಳ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾವು ನ್ಯಾಯಸಮರ್ಥವಾಗಿ ಮಾತನಾಡುತ್ತಿದ್ದೇವೆ. ನಾವೇನೂ ತನಿಖೆ ಬೇಡ ಎಂದು ಹೇಳಿಲ್ಲವಲ್ಲ. ಸತ್ಯಶೋಧನೆ ಆಗದೇ ತನಿಖೆಯಾಗದೇ ಯಾವುದೇ ಅಂತಿಮನಿರ್ಧಾರಕ್ಜೆ ಬರುವುದು ತಪ್ಪು ಎಂದರು. ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪೊಲೀಸ್ ರಾಜ್ಯ ನಡೆಯುತ್ತಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ. ವಿರೋಧ ಪಕ್ಷಗಳ ಮೇಲೆ ದ್ವೇಷ ಸಾಧಿಸಲು ಹಲವಾರು ಎಸ್ ಐಟಿ ರಚನೆ ಮಾಡಿ ಹಲವಾರು ತನಿಖೆ ಮಾಡುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಅವರ ವಿರುದ್ದವೇ ತನಿಖೆ ನಡೆಯುತ್ತಿದೆ.ಇಂತಹ ಸಂದರ್ಭದಲ್ಲಿ ಪೊಲೀಸ್ ವ್ಯವಸ್ಥೆ ದುರ್ಬಳಕೆ ವಿಧಾನಸೌಧದವರೆಗೂ ತಲುಪಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬೆಳಗಾವಿ ಅಧಿವೇಶನದಲ್ಲಿ ಮೊದಲು ರೈತ ಸಮುದಾಯವಾಗಿರುವ ಪಂಚಮಸಾಲಿ ಸಮುದಾಯದ ಮೇಲೆ ಲಾಠಿ ಚಾರ್ಜ್ ಮಾಡಿ ರಕ್ತ ಸುರಿಸಿದರು. ಹಲವಾರು ಬಾರಿ ರೈತರು, ಇದೇ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ಮಾಡಿದಾಗಲೂ ಈ ರೀತಿ ನಡೆದಿರಲಿಲ್ಲ. ಒಂದು ರೀತಿಯಲ್ಲಿ ಪೊಲೀಸರ ದಬ್ಬಾಳಿಕೆಯಿಂದಲೇ ಎಲ್ಲವನ್ನು ಮಾಡಬಲ್ಲೆ ಎಂಬ ಅಭಿಪ್ರಾಯ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಬಂದಂತಿದೆ. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಯವರ ಬಂಧನ ಸದನದೊಳಗೆ ಆಗಿರುವ ಘಟನೆಯ ಬಗ್ಗೆ ಸಭಾಪತಿಯವರು ನಿರ್ಣಯ ಮಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸದ ಗೋವಿಂದ ಕಾರಜೋಳ ಹಾಜರಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None
Popular Tags:
Share This Post:
ಈ ಷರತ್ತಿನ ಮೇಲೆ ಸಿಟಿ ರವಿಯನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆದೇಶಿಸಿದ ಹೈಕೋರ್ಟ್: ಏನದು?
December 20, 2024What’s New
Spotlight
Today’s Hot
Featured News
Latest From This Week
Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ!!!
KANNADA
- by Sarkai Info
- December 20, 2024
ದಪ್ಪ ಮೀಸೆ ಪೊಲೀಸರಿಗೆ ಸಿಗುತ್ತೆ ʼಬೋನಸ್ʼ..! ದೊಡ್ಡ ಮೀಸೆ ಇದ್ರೆ ಈ ರಾಜ್ಯಗಳಲ್ಲಿ ವಿಶೇಷ ಗೌರವ..
KANNADA
- by Sarkai Info
- December 20, 2024
ಬೆತ್ತಲೆಯಾಗಿ ಮಹಿಳಾ ಬೋಗಿ ಹತ್ತಿದ ವ್ಯಕ್ತಿ..! ಭೀಕರ ದೃಶ್ಯಕಂಡು ಬೆಚ್ಚಿಬಿದ್ದ ನಾರಿಯರು.. ವಿಡಿಯೋ ವೈರಲ್..
KANNADA
- by Sarkai Info
- December 20, 2024
Subscribe To Our Newsletter
No spam, notifications only about new products, updates.