ಬೆಂಗಳೂರು: ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ದೇವ್ರೆ ಇನ್ನೂ ಈ ಕಣ್ಣಲ್ಲಿ ಏನೇನ್ ನೋಡ್ಬೇಕಪ್ಪಾ..! ರೋಬೋಟ್ ಜೊತೆ ಡೇಟಿಂಗ್ ಹೋದ ವಿಶ್ವದ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್! ಇವರೇ ಹಿಂಗಾಂದ್ರೆ ನಮ್ಮ ಗತಿ ಏನು ಗುರು? "ಪಿಎಮ್ ಸೂರ್ಯ ಘರ್ ಯೋಜನೆಗೆ ಈವರೆಗೆ 5.14 ಲಕ್ಷ ನೋಂದಣಿಯಾಗಿದ್ದು, ಈ ಪೈಕಿ ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್‌ಆರ್ ಇ ಪೋರ್ಟಲ್ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ," ಎಂದು ಬೆಸ್ಕಾಂ ಎಂಡಿ ವಿವರಿಸಿದರು. "ರಾಜ್ಯಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮರ್ಥ ನಾಯಕತ್ವದಲ್ಲಿ ಯೋಜನೆಯನ್ನು ಉತ್ತೇಜಿಸುವ ಗುರಿ ಹೊಂದಿದ್ದೇವೆ. ಈ ಮೂಲಕ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಮತ್ತು ನವೀಕರಿಸಬಹುದಾದ ಇಂಧನದ ರಾಷ್ಟ್ರೀಯ ಗುರಿ ಸಾಧಿಸಲು ಕೊಡುಗೆ ನೀಡುತ್ತೇವೆ," ಎಂದು ಹೇಳಿದರು. "ಗ್ರಿಡ್ ಸಂಪರ್ಕಿತ ಮೇಲ್ಛಾವಣಿ ಸ್ಥಾವರಗಳಿಗೆ ಕೇಂದ್ರ ಸರ್ಕಾರವು 30,000 ರೂ. ರಿಂದ 78,000ರೂ. ವರೆಗೆ ಸಹಾಯಧನ ನೀಡುತ್ತದೆ ಮತ್ತು ಈ ಯೋಜನೆ ಅನುಷ್ಠಾನಕ್ಕೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಸಹ ಇರುತ್ತದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಪಡೆಯಲು ಅಪಾರ್ಟ್‌ಮೆಂಟ್ ಫೆಡರೇಶನ್‌ಗಳಿಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಇರುವ ಸಮಸ್ಯೆಗಳ ಕುರಿತು ಕಾರ್ಯಾಗಾರದಲ್ಲಿ ಅಪಾರ್ಟ್‌ಮೆಂಟ್ ಫೆಡರೇಷನ್ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಬೆಸ್ಕಾಂ ಎಂಡಿ, ಈ ಯೋಜನೆಯ ಸಾಲ ಸೌಲಭ್ಯದ ಬಗ್ಗೆ ಗ್ರಾಹಕರಿಗೆ ಸ್ಪಷ್ಟ ಮಾಹಿತಿ ನೀಡುವಂತೆ , ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ (ಎಸ್‌ಎಲ್‌ಬಿಸಿ) ಪ್ರತಿನಿಧಿಗೆ ಸೂಚಿಸಿದರು. ಪ್ರಸ್ತುತ ಬ್ಯಾಂಕ್ ಗಳಿಂದ ಸಾಲ ಸೌಲಭ್ಯವು 65 ವರ್ಷ ವಯೋಮಿತಿಗೆ ಸೀಮಿತವಾಗಿರುತ್ತದೆ. 65 ವರ್ಷ ಮೇಲ್ಪಟ್ಟ ಗ್ರಾಹಕರು, ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಜಂಟಿ ಅರ್ಜಿದಾರರನ್ನಾಗಿ ಸೇರಿಸಿ ಸಾಲವನ್ನು ಪಡೆಯಬಹುದು ಎಂದು ಎಸ್‌ಎಲ್‌ಬಿಸಿ ಪ್ರತಿನಿಧಿ ಮಾಹಿತಿ ನೀಡಿದರು. ಪಿಎಮ್ ಸೂರ್ಯ ಘರ್ ಯೋಜನೆಯಡಿಯಲ್ಲಿ ಸಾಲ ಪಡೆಯಲು ಬ್ಯಾಂಕ್‌ಗಳಿಗೆ ಮೇಲಾಧಾರ ಭದ್ರತೆಯ ಅಗತ್ಯವಿರುವುದಿಲ್ಲ ಎಂದು ಬ್ಯಾಂಕರ್‌ಗಳ ಪ್ರತಿನಿಧಿ ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು. ಯೋಜನೆಯಡಿಯಲ್ಲಿ ಬ್ಯಾಂಕ್ ಸಾಲ ಪಡೆಯಲು ಅರ್ಜಿ ಸಲ್ಲಿಸಿದಾಗ, ಬ್ಯಾಂಕ್‌ಗಳು ತಮ್ಮನ್ನು ಎಂಎಸ್‌ಎಂಇ ಎಂದು ಪರಿಗಣಿಸುತ್ತಿವೆ. ಆದರೆ, ಅಪಾರ್ಟ್‌ಮೆಂಟ್ ಫೆಡರೇಷನ್‌ಗಳು ಎಂಎಸ್ಎಂಇ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಅಪಾರ್ಟ್‌ಮೆಂಟ್ ಫೆಡರೇಷನ್ ಪ್ರತಿನಿಧಿಗಳು ಬೆಸ್ಕಾಂ ಎಂಡಿ ಅವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಎಲ್‌ಬಿಸಿ ಪ್ರತಿನಿಧಿ, ಅಪಾರ್ಟ್ ಮೆಂಟ್ ಫೆಡರೇಷನ್‌ಗಳಿಗೆ ಸಾಲ ನೀಡುವ ಬಗ್ಗೆ ಎಂಎನ್‌ಆರ್‌ಇ ನಿಂದ ಸ್ಪಷ್ಟ ನಿರ್ದೇಶನ ಇಲ್ಲದಿರುವ ಕಾರಣ, ಇದಕ್ಕೆ ಸಂಬಂಧಪಟ್ಟ ಮಾರ್ಗ ಸೂಚಿಗಳನ್ನು ಹೊರಡಿಸುವಂತೆ ಎಂಎನ್‌ಆರ್‌ಇಯನ್ನುಕೋರಲಾಗಿದೆ ಎಂದು ಉತ್ತರಿಸಿದರು. ರಾಜ್ಯದಲ್ಲಿ ಸುಮಾರು 37 ಲಕ್ಷ ಗೃಹ ಜ್ಯೋತಿಯೇತರ ಗ್ರಾಹಕರಿಗೆ ಯೋಜನೆಯನ್ನು ತಲುಪಿಸುವ ಉದ್ದೇಶದೊಂದಿಗೆ ರಾಜ್ಯದ ನೋಡಲ್ ಏಜೆನ್ಸಿಯಾದ ಬೆಸ್ಕಾಂ ಇದರ ತ್ವರಿತ ಅನುಷ್ಠಾನಕ್ಕೆ ಮುಂದಾಗಿದೆ. ಗಳೂರಿನ ವಿವಿಧ ಅಪಾರ್ಟ್ ಮೆಂಟ್ ಫೆಡರೇಷನ್ ಪ್ರತಿನಿಧಿಗಳು, ನೋಂದಾಯಿತ ಖಾಸಗಿ ಏಜೆನ್ಸಿಗಳ ಪ್ರತಿನಿಧಿಗಳು, ಎಸ್ ಎಲ್ ಬಿಸಿ ಪ್ರತಿನಿಧಿ, ಬೆಸ್ಕಾಂನ ತಾಂತ್ರಿಕ ನಿರ್ದೇಶಕ ರಮೇಶ್ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಧಾನಿಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ ಕೇಂದ್ರ ಸರ್ಕಾರದ ಮೇಲ್ಛಾವಣಿಯ ಸೌರ ವಿದ್ಯುತ್ ಯೋಜನೆ- ಪ್ರಧಾನಮಂತ್ರಿ ಸೂರ್ಯ್ ಘರ್ ಮುಫ್ತ್ ಬಿಜ್ಲಿ ಯೋಜನೆ ಆರಂಭಿಸಿದೆ.2025-26 ರವರೆಗೆ ಒಟ್ಟು 750 ಶತಕೋಟಿ ರೂ. ವೆಚ್ಚದೊಂದಿಗೆ, ಈ ಯೋಜನೆಯು ದೇಶಾದ್ಯಂತ 10 ದಶಲಕ್ಷ ಮನೆಗಳಿಗೆ ಮಾಸಿಕ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿ ಹೊಂದಿದೆ. ಈ ಯೋಜನೆಯು 2024ರ ಫೆಬ್ರವರಿಯಲ್ಲಿ ಆರಂಭವಾದ ಒಂದು ತಿಂಗಳೊಳಗೆ 10 ದಶಲಕ್ಷಕ್ಕೂ ಹೆಚ್ಚು ನೋಂದಣಿಗಳೊಂದಿಗೆ ಅಪಾರ ಜನಪ್ರಿಯತೆ ಪಡೆದುಕೊಂಡಿದೆ. ಪ್ರಾರಂಭವಾದಾಗಿನಿಂದ, 6.3 ಲಕ್ಷ ಸ್ಥಾಪನೆಗಳು ಕೇವಲ 9 ತಿಂಗಳಲ್ಲಿ ಪೂರ್ಣಗೊಂಡಿವೆ. ಈ ಮೂಲಕ ಮಾಸಿಕ ಸ್ಥಾಪನೆ ದರ 70,000 ಆಗಿದೆ. ಗ್ರಿಡ್-ಸಂಪರ್ಕಿತ ಛಾವಣಿಯ ಸೌರ ಛಾವಣಿಯ ಪ್ರಯೋಜನಗಳು * ಹೆಚ್ಚುವರಿ ಸ್ಥಳಾವಕಾಶದ ಅಗತ್ಯವಿಲ್ಲ. * 78,000 ರೂ. ವರೆಗೆ ಸರ್ಕಾರದ ಸಬ್ಸಿಡಿ. * ವಿದ್ಯುತ್ ಬಿಲ್ ಹೊರೆ ತಪ್ಪುವುದು. * ಪರಿಸರ ಸ್ನೇಹಿ ನವೀಕರಿಸಬಹುದಾದ ಇಂಧನದ ಬಳಕೆ * ಕನಿಷ್ಠ ನಿರ್ವಹಣೆ ವೆಚ್ಚ. * ಇಂಗಾಲದ ಹೊರಸೂಸುವಿಕೆ ತಗ್ಗುವುದು. ಇದನ್ನೂ ಓದಿ: ಈ 3 ರಾಶಿಯವರು ಕೈಗೆ ಕೆಂಪು ದಾರ ಕಟ್ಟಿದರೆ ಅದೃಷ್ಟವೇ ನಿಮ್ಮತ್ತ ವಾಲಿದಂತೆ: ಸಾಕ್ಷಾತ್ ಬ್ರಹ್ಮ, ವಿಷ್ಣು, ಮಹೇಶ್ವರರ ದೈವಬಲ ಕೈಹಿಡಿದು ನಡೆಸಿದ ಸಮಾನ ಸಬ್ಸಿಡಿ 1. 1ಕಿ.ವ್ಯಾ - 2ಕಿ.ವ್ಯಾ ಸಾಮರ್ಥ್ಯದ ಘಟಕ 30,000-60,000 ರೂ. 2. 2 ಕಿ.ವ್ಯಾ. – 3 ಕಿ.ವ್ಯಾ. ಸಾಮರ್ಥ್ಯ 60,000- 78,000 ರೂ. 3. 3 ಕಿ.ವ್ಯಾ. ಗಿಂತ ಹೆಚ್ಚಿನ ಸಾಮರ್ಥ್ಯದ ಘಟಕ ಗರಿಷ್ಠ ಸಬ್ಸಿಡಿ 78,000 ರೂ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ None
Popular Tags:
Share This Post:
ಒಡೆದ ಹಿಮ್ಮಡಿಯನ್ನು 15 ನಿಮಿಷದಲ್ಲೇ ಸರಿಪಡಿಸುವ ಪರಿಣಾಮಕಾರಿ ಮನೆಮದ್ದು!
- by Sarkai Info
- December 24, 2024
ಜೈಲಿನಲ್ಲಿ ವಿವಸ್ತ್ರ ಮಾಡಿ ಕೂರಿಸಿದ್ರು, ಪ್ರೈವೇಟ್ ಪಾರ್ಟ್ ಅನ್ನು ಬಿಡಲಿಲ್ಲ ಎಂದು ಅಳಲುತೋಡಿಕೊಂಡ ನಟಿ!
December 24, 2024What’s New
Spotlight
Today’s Hot
-
- December 24, 2024
-
- December 23, 2024
-
- December 23, 2024
Featured News
Latest From This Week
ಮಹಿಳೆಯರ ಬಗ್ಗೆ ಪ್ರತಿಯೊಬ್ಬ ಪುರುಷನೂ ತಿಳಿದುಕೊಳ್ಳಲೇಬೇಕಾದ ಕಹಿ ಸತ್ಯಗಳು!!
KANNADA
- by Sarkai Info
- December 23, 2024
ರಾಮ್ ಚರಣ್ ಪುತ್ರಿ ಕ್ಲಿಂಕಾರ ಫೇಸ್ ರಿವೀಲ್! ಎಷ್ಟೊಂದು ಮುದ್ದಾಗಿದ್ದಾಳೆ ಗೊತ್ತಾ ಚಿರಂಜೀವಿ ಮೊಮ್ಮಗಳು!!
KANNADA
- by Sarkai Info
- December 23, 2024
Subscribe To Our Newsletter
No spam, notifications only about new products, updates.