KANNADA

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.. ಗಗನಕ್ಕೇರಿದ ಬೆಳ್ಳಿ ದರ!

Gold Rate Today: ದೇಶದಾದ್ಯಂತ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿದಿದ್ದು, ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ. MCX ನಲ್ಲಿ ಚಿನ್ನದ ದರ ಇಂದು 10 ಗ್ರಾಂಗೆ 70,912 ರೂ.ಗೆ ಇಳಿದಿದೆ. ಈ ಮೊದಲು 10 ಗ್ರಾಂ ಚಿನ್ನದ ಬೆಲೆ 71,150 ರೂಪಾಯಿ ಆಗಿತ್ತು. ಇಂದು ಬಂಗಾರದ ಬೆಲೆಯಲ್ಲಿ 426 ರೂಪಾಯಿ ಕುಸಿತ ಕಂಡಿದೆ. ಇದೇ ವೇಳೆ ಬೆಳ್ಳಿ ಬೆಲೆಯಲ್ಲಿ 326 ರೂಪಾಯಿ ಏರಿಕೆ ಕಂಡು ಬಂದಿದೆ. ದೇಶದ ಮೆಟ್ರೋಪಾಲಿಟನ್ ನಗರಗಳಲ್ಲೂ ಚಿನ್ನದ ಬೆಲೆ ಇಳಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್ ಶುದ್ಧ 10 ಗ್ರಾಂ ಚಿನ್ನದ ಬೆಲೆ 71,820 ರೂಪಾಯಿ, ಮುಂಬೈನಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 71,760 ರೂಪಾಯಿ, ಚೆನ್ನೈನಲ್ಲಿ 24 ಕ್ಯಾರೆಟ್ ಶುದ್ಧ 10 ಗ್ರಾಂ ಚಿನ್ನದ ಬೆಲೆ 72,330 ರೂಪಾಯಿ, ಬೆಂಗಳೂರಿನಲ್ಲಿ 24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ 71,670 ರೂಪಾಯಿ ಆಗಿದೆ. ಇದನ್ನೂ ಓದಿ: PM Kisan: ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿ, ಪ್ರಧಾನಿ ಮೋದಿ ಮಾಡಿದ ಮೊದಲ ಕೆಲಸ ಇದು! ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ, Comex ನಲ್ಲಿ ಚಿನ್ನದ ಬೆಲೆ $11.80 ರಷ್ಟು ಕುಸಿದಿದೆ. ದರವು ಪ್ರತಿ ಔನ್ಸ್ ಗೆ $ 2313.20 ಆಗಿದೆ. ಬೆಳ್ಳಿಯ ಬೆಲೆ $ 0.225 ಹೆಚ್ಚಾಗಿದೆ. ಕಳೆದ ತಿಂಗಳು ಭಾರತ ಸುಮಾರು 46 ಟನ್ ಚಿನ್ನ ಖರೀದಿಸಿತ್ತು. ವರ್ಲ್ಡ್ ಗೋಲ್ಡ್ ಕೌನ್ಸಿಲ್ ಅಂಕಿಅಂಶಗಳ ಪ್ರಕಾರ, ಮೇ ತಿಂಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಚಿನ್ನ ಖರೀದಿದಾರನಾಗಿತ್ತು. ಈ ಅವಧಿಯಲ್ಲಿ ಭಾರತ 722 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಖರೀದಿಸಿದೆ. ಇದನ್ನೂ ಓದಿ: Ather Rizta: ಅತ್ಯಂತ ಕಡಿಮೆ ಬೆಲೆಗೆ ಈ ಫ್ಯಾಮಿಲಿ ಎಲೆಕ್ಟ್ರಿಕ್‌ ಸ್ಕೂಟರ್‌ ಖರೀದಿಸಿ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.