KANNADA

ಹೊಸ ವರ್ಸದ ಹೊಸ್ತಿಲಲ್ಲಿ ಗ್ರಾಹಕರಿಗೆ ಶಾಕ್ ನೀಡಿದ Maruti Suzuki! ಬಲು ದುಬಾರಿಯಾಗಲಿದೆ ಕಂಪನಿಯ ಕಾರುಗಳು !

Maruti Suzuki car price hike: ಭಾರತದ ಅತಿದೊಡ್ಡ ಕಾರು ತಯಾರಕ ಮಾರುತಿ ಸುಜುಕಿ. ಆದರೆ, ಮಾರುತಿ ಸುಜುಕಿ ತನ್ನ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. ಕಂಪನಿಯು ತನ್ನ ಬೈಕುಗಳು ಮತ್ತು ಕಾರುಗಳ ಬೆಲೆಗಳನ್ನು ಹೆಚ್ಚಿಸಲಿದೆ. ಜನವರಿ 2025ರಿಂದ ಎಲ್ಲಾ ಕಾರುಗಳ ಬೆಲೆಗಳನ್ನು ಶೇಕಡಾ 4 ರಷ್ಟು ಹೆಚ್ಚಿಸಲಾಗುವುದು ಎಂದು ಮಾರುತಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಎಲ್ಲಾ ಮಾರುತಿ ಕಾರುಗಳ ಬೆಲೆಗಳನ್ನು ಮಾಡೆಲ್‌ಗಳಿಗೆ ಅನುಗುಣವಾಗಿ ವಿಭಿನ್ನವಾಗಿ ನಿರ್ಧರಿಸಬಹುದು. ಮಾರುತಿ ಬೆಲೆ ಏರಿಕೆ ಮಾಡಿರುವ ಕಾರಣ : ಇನ್‌ಪುಟ್ ವೆಚ್ಚ ಮತ್ತು ಕಾರ್ಯಾಚರಣೆ ವೆಚ್ಚಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿ ವಾಹನಗಳ ಬೆಲೆಗಳನ್ನು ಹೆಚ್ಚಿಸಲಾಗುತ್ತಿದೆ ಎಂದು ಮಾರುತಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ, ನಾವು ಯಾವಾಗಲೂ ಕಾರಿನ ಬೆಲೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ ಎಂದು ಕಂಪನಿ ಹೇಳಿದೆ. ಇದರಿಂದ ಗ್ರಾಹಕರ ಮೇಲೆ ಕಡಿಮೆ ಪರಿಣಾಮ ಬೀರುತ್ತದೆ.ಇದು ಮಾರುಕಟ್ಟೆಯ ಮೇಲೂ ಪರಿಣಾಮ ಬೀರಬಹುದು ಎಂದು ಕಂಪನಿಯು ಹೇಳಿಕೊಂಡಿದೆ. ಇದನ್ನೂ ಓದಿ : ಬಿ‌ಎಸ್‌ಎನ್‌ಎಲ್ ₹200ಗಿಂತಲೂ ಅಗ್ಗದ ಬೆಲೆಯಲ್ಲಿ ಅನ್ಲಿಮಿಟೆಡ್ ಕಾಲ್, ಡೇಟಾ ಎಲ್ಲವೂ ಉಚಿತ...! ಮಾರುತಿಯ ಅಗ್ಗದ ಕಾರು ಎಷ್ಟು ದುಬಾರಿ : ವಾಸ್ತವವಾಗಿ, ಮಾರುತಿಯ K10 ಭಾರತೀಯರ ಅತ್ಯಂತ ನೆಚ್ಚಿನ ಕಾರುಗಳಲ್ಲಿ ಒಂದಾಗಿದೆ. ಈ ವಾಹನದ (ಎಕ್ಸ್ ಶೋ ರೂಂ) ಬೆಲೆ 3.99 ಲಕ್ಷದಿಂದ ಪ್ರಾರಂಭವಾಗುತ್ತದೆ. ಕಂಪನಿಯ ಪ್ರಕಾರ, ಈ ಕಾರಿನ ಬೆಲೆಯಲ್ಲಿ ಶೇಕಡಾ 4 ರಷ್ಟು ಏರಿಕೆಯಾದರೆ, ಅದರ ಬೆಲೆ ಸುಮಾರು 16 ಸಾವಿರ ರೂಪಾಯಿಗಳಷ್ಟು ಹೆಚ್ಚಾಗಬಹುದು. ಆದರೆ, ಆಲ್ಟೊ ಕೆ10 ನ ಟಾಪ್ ಮಾಡೆಲ್ ಕಾರಿನ ಬೆಲೆ 5.96 ಲಕ್ಷ (ಎಕ್ಸ್ ಶೋ ರೂಂ) ಆಗಿದೆ. ಆದರೆ ಜನವರಿ 2025 ರಲ್ಲಿ, ಈ ಕಾರಿನ ಬೆಲೆಯು 4%ಹೆಚ್ಚಳದೊಂದಿಗೆ 6.20 ಲಕ್ಷಕ್ಕೆ (ಎಕ್ಸ್ ಶೋ ರೂಂ) ಹೆಚ್ಚಾಗಬಹುದು. ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - ಸಬ್ ಸ್ಕ್ರೈಬ್ಆಗಿರಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.