KANNADA

ಮತ್ತೆ ಹದಗೆಟ್ಟಿತು ವಿನೋದ್ ಕಾಂಬ್ಳಿ ಆರೋಗ್ಯ... ದಿಢೀರ್ ಆಸ್ಪತ್ರೆಗೆ ದಾಖಲು! ಸಚಿನ್‌ ಗೆಳೆಯನಿಗೆ ಏನಾಯ್ತು?

Vinod Kambli: ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದರು. ಇತ್ತೀಚೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ರಮಾಕಾಂತ್ ಅಚ್ರೇಕರ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಕಾಂಬ್ಳಿ ಭಾಗವಹಿಸಿದ್ದು, ಈ ವೇಳೆ ಬಾಲ್ಯದ ಗೆಳೆಯ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿ ಮಾಡಿದ್ದರು. ಆ ವೇಳೆಯ ವಿಡಿಯೋ ವೈರಲ್ ಆಗಿತ್ತು. ಇದನ್ನೂ ಓದಿ: ಅದೃಷ್ಟಲಕ್ಷ್ಮೀ ಕೈಹಿಡಿಯಬೇಕಾದರೆ ಕನ್ನಡಿಯನ್ನು ಮನೆಯ ಈ ದಿಕ್ಕಿನಲ್ಲಿಯೇ ಇಡಿ: ಬಡತನ ದೂರಾಗಿ, ಸಮೃದ್ಧ ಜೀವನ ಆ ಕ್ಷಣದಿಂದಲೇ ಶುರುವಾಗುವುದು! ಆದರೆ ಇದೀಗ ಅವರ ಆರೋಗ್ಯ ಹದಗೆಟ್ಟಿದ್ದು, ಪ್ರಜ್ಞಾಹೀನರಾಗಿ ಬಿದ್ದಿದ್ದರು ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕಾಂಬ್ಳಿ ಅವರನ್ನು ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಐಎಎನ್ಎಸ್ ವರದಿ ಮಾಡಿದೆ. ಇದನ್ನೂ ಓದಿ: ಮಧುಮೇಹಿಗಳಿಗೆ ವರದಾನ.. ಊಟಕ್ಕೂ ಮುನ್ನ ಈ ಸಿಹಿಯಾದ ಹಣ್ಣು ತಿಂದ್ರೆ ಜನ್ಮದಲ್ಲೇ ಹೆಚ್ಚಾಗಲ್ಲ ಬ್ಲಡ್‌ ಶುಗರ್!‌ 52 ವರ್ಷದ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಇನ್ನೂ ನಿರ್ಣಾಯಕವಾಗಿದ್ದರೂ, ಅವರ ಅನಾರೋಗ್ಯದ ಬಗ್ಗೆ ವಿವರವಾದ ಮಾಹಿತಿಗಾಗಿ ಕಾಯಲಾಗುತ್ತಿದೆ. ಇತ್ತೀಚೆಗಷ್ಟೇ ವಿಶ್ವ ಚಾಂಪಿಯನ್ ಕಪಿಲ್ ದೇವ್ ಮತ್ತು ಸುನಿಲ್ ಗವಾಸ್ಕರ್ ಅವರಿಗೆ ಆರ್ಥಿಕ ಸಹಾಯ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.