KANNADA

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ಪತನ.. 62 ಮಂದಿ ಸಾವು! ಆಕಾಶದಿಂದ ವಿಮಾನ ಬೀಳುವ ವಿಡಿಯೋ ವೈರಲ್‌

Plane Crashes In Brazil: ಬ್ರೆಜಿಲ್ ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಇದ್ದಕ್ಕಿದ್ದಂತೆ ಪತನಗೊಂಡಿದೆ. ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಭೂಮಿಗೆ ಅಪ್ಪಳಿಸಿದೆ. ದೊಡ್ಡ ಬೆಂಕಿ ಮತ್ತು ದಟ್ಟ ಹೊಗೆ ಇತ್ತು ಆ ಪ್ರದೇಶವನ್ನು ಆವರಿಸಿಕೊಂಡಿತ್ತು. ಅಪಘಾತದ ಸಮಯದಲ್ಲಿ 58 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಈ ವಿಮಾನದಲ್ಲಿ ಇದ್ದರು. ಅಪಘಾತದ ವೇಳೆ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ವಿಷಯವನ್ನು ಬ್ರೆಜಿಲ್‌ನ ರಾಷ್ಟ್ರೀಯ ಮಾಧ್ಯಮಗಳು ಖಚಿತಪಡಿಸಿವೆ. ಇದನ್ನೂ ಓದಿ: Bangladesh Violence: ಢಾಕಾದಲ್ಲಿ ಸೆಕ್ಷನ್ 144 ಜಾರಿ, ಮೊಬೈಲ್ ಇಂಟರ್ನೆಟ್ ಅನಿರ್ದಿಷ್ಟಾವಧಿ ಬಂದ್ Video footage shows the aftermath of the plane crash that allegedly resulted in the deaths of 68 passengers. #Brazil #planecrash pic.twitter.com/nCtzeFxLxV — War Correspondent (@War_monitor1) August 9, 2024 ವಿಮಾನವು ಬ್ರೆಜಿಲ್‌ನ ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಹೊರಟು ಸಾವೊ ಪಾಲೊ ರಾಜ್ಯದ ಗೌರುಲ್ಹೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ವಿನ್ಹೆಡೋದ ವಸತಿ ಪ್ರದೇಶದಲ್ಲಿ ಪತನಗೊಂಡಿತು. ವಿಮಾನ ಪತನಗೊಂಡ ತಕ್ಷಣ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನ ಸುಟ್ಟು ಕರಕಲಾಗಿದೆ. ಅಪಘಾತದ ಬಗ್ಗೆ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಆಘಾತ ವ್ಯಕ್ತಪಡಿಸಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಭದ್ರತಾ ಸಿಬ್ಬಂದಿ, ಪೊಲೀಸರು ಮತ್ತು ಸೇನಾ ಪಡೆಗಳು ರಕ್ಷಣಾ ಕ್ರಮಗಳನ್ನು ಕೈಗೊಂಡವು. 🚨🇧🇷 BREAKING: Video footage shows the aftermath of the plane crash that allegedly resulted in the deaths of 68 passengers. #Brazil #planecrash pic.twitter.com/e15sQZPqPM — Berkan Yılmaz (@Berk04790) August 9, 2024 ಇದನ್ನೂ ಓದಿ: ಬಾಂಗ್ಲಾದೇಶದಾದ್ಯಂತ ಸರ್ಕಾರಿ ವಿರೋಧಿ ಪ್ರತಿಭಟನೆಯಲ್ಲಿ 72 ಮಂದಿ ಸಾವು ಅಪಘಾತ ನಡೆದ ಸ್ಥಳ ಜನವಸತಿ ಪ್ರದೇಶವಾಗಿರುವುದರಿಂದ ಸ್ಥಳೀಯರೂ ಸಾವನ್ನಪ್ಪಿರುವ ಸಾಧ್ಯತೆ ಇದೆ. ವಿಮಾನ ಪತನಗೊಂಡ ಸ್ಥಳದಲ್ಲಿ ಮನೆಗಳು ಮತ್ತು ಗುಡಿಸಲುಗಳಿವೆ ಎಂದು ಸ್ಥಳೀಯ ಮಾಧ್ಯಮಗಳು ಹೇಳುತ್ತವೆ. ಆದರೆ ಈ ವಿಮಾನ ಯಾವ ವಿಮಾನಯಾನ ಸಂಸ್ಥೆಗೆ ಸೇರಿದ್ದು ಎಂಬುದು ಇನ್ನೂ ತಿಳಿದುಬಂದಿಲ್ಲ. ಅಪಘಾತದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿಮಾನ ಪತನದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಕಾಶದಿಂದ ವಿಮಾನ ಬೀಳುವ ದೃಶ್ಯಗಳು ವೈರಲ್‌ ಆಗಿವೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.