NEWS

Bengaluru: ಇಂದು ಬೆಂಗಳೂರಿನ ಹೃದಯ ಭಾಗದಲ್ಲಿ ಟ್ರಾಫಿಕ್‌ ಜಾಮ್‌ ಫಿಕ್ಸ್! ಮನೆ ಬಿಡೋ ಮುನ್ನ ಹುಷಾರ್!

ಸಾಂದರ್ಭಿಕ ಚಿತ್ರ ಬೆಂಗಳೂರು: ಮುಡಾದಲ್ಲಿನ (MUDA Scam) ಅವ್ಯವಹಾರ ಆರೋಪ ಪ್ರಕರಣ ಭಾರೀ ಸದ್ದು ಮಾಡ್ತಿದೆ. ಸಿಎಂ (CM Siddaramaiah) ವಿರುದ್ಧ ವಿಪಕ್ಷಗಳು ಮುಗಿಬಿದ್ದಿವೆ. ಈ ಮಧ್ಯೆ, ಸಿಎಂ ಬೆಂಬಲಕ್ಕೆ ಶೋಷಿತ ವರ್ಗಗಳ ಒಕ್ಕೂಟ ನಿಂತಿದೆ. ಇಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ನೇತೃತ್ವದಲ್ಲಿ ರಾಜಭವನ ಚಲೋಗೆ ಕರೆ ನೀಡಲಾಗಿದೆ. ಸುಮಾರು 1 ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಸಿಎಂ ಪರವಾಗಿ ನಡೆಯುತ್ತಿರುವ ಶೋಷಿತ ವರ್ಗಗಳ ಒಕ್ಕೂಟದ ಪ್ರತಿಭಟನೆಗೆ ರಾಜ್ಯದ ಮೂಲೆ ಮೂಲೆಗಳಿಂದ ಜನ ಆಗಮಿಸಲಿದ್ದಾರೆ. ಇಂದು ರೈಲು, ಬಸ್ ಮಾರ್ಗವಾಗಿ ಫ್ರೀಡಂಪಾರ್ಕ್ ತಲುಪಲಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಇರುವುದರಿಂದ ಇಂದು ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಲಿದೆ. ಪರ್ಯಾಯ ಮಾರ್ಗಗಳನ್ನ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ. ರಾಜಭವನ ಚಲೋ ರಾಜ್ಯದ ವಿವಿಧ ಜಿಲ್ಲೆಗಳಿಂದ 1 ಲಕ್ಷಕ್ಕೂ ಅಧಿಕ ಜನ ಆಗಮಿಸುವ ನಿರೀಕ್ಷೆ ಇದೆ. ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ ಮೊದಲು ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11.30ಕ್ಕೆ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, ಬಳಿಕ ರಾಜಭವನ ಚಲೋ ನಡೆಸಲಾಗುತ್ತೆ. ಇದನ್ನೂ ಓದಿ: Karnataka: ಸರ್ಕಾರ ಗುಡ್‌ ನ್ಯೂಸ್‌, ದುಬಾರಿ ಮದ್ಯ ಇಂದಿನಿಂದ ಅಗ್ಗ! ಭಾಗವಹಿಸಬೇಕೋ? ಬೇಡವೋ? ಇನ್ನ, ಸಿಎಂ ಪರವಾಗಿ ನಡೆಯುತ್ತಿರುವ ಈ ಪ್ರತಿಭಟನೆ ಶೋಷಿತ ಸಮುದಾಯಗಳ ಒಕ್ಕೂಟದ ಬ್ಯಾನರ್ ಅಡಿಯಲ್ಲಿ ನಡೆಯುತ್ತಿದೆ. ರಾಜಭವನ ಚಲೋಗೆ ಕಾಂಗ್ರೆಸ್ ಮುಖಂಡರು ಭಾಗವಹಿಸಬೇಕೋ? ಬೇಡವೋ? ಎಂಬ ಗೊಂದಲದಲ್ಲಿದ್ದಾರೆ ಕಾಂಗ್ರೆಸ್ ಮುಖಂಡರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಂದಲೂ ಯಾವುದೇ ಸೂಚನೆ ಬಂದಿಲ್ಲ. ವೈಯಕ್ತಿಕವಾಗಿ ಯಾರು ಬೇಕಾದರೂ ಪ್ರತಿಭಟನೆಯಲ್ಲಿ ಭಾಗವಹಿಸಬಹುದು ಅಂತ ಅಹಿಂದ ವರ್ಗ ಕರೆ ನೀಡಿದೆ. ಇಂದಿನ ಪ್ರತಿಭಟನೆಯಲ್ಲಿ ಯಾವೆಲ್ಲಾ ಕಾಂಗ್ರೆಸ್ ನಾಯಕರು ಭಾಗಿಯಾಗ್ತಾರೆ ಅನ್ನೋದು ಕುತೂಹಲ ಮೂಡಿಸಿದೆ. ವೈಟ್ನರ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ ಮೂಡ ದಾಖಲಾತಿಗೆ ವೈಟ್ನರ್ ಹಾಕಿ ಕೆಲವು ವಿಚಾರಗಳನ್ನು ಮರೆಮಾಚಿದ್ದಾರೆ ಅಂತ ಬಿಜೆಪಿ ಆರೋಪದ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ. ವೈಟ್ನರ್ ಹಿಂದಿನ ಅಕ್ಷರಗಳ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ವೈಟ್ನರ್‌ ಹಿಂದಿರುವ ಅಕ್ಷರಗಳು ಬಹಿರಂಗಪಡಿಸಿದ್ದಾರೆ. ಬಿಜೆಪಿಗೆ ತಿರುಗೇಟು ನೀಡಿರುವ ಸಿಎಂ ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ನೋಡಿ. ನನ್ನ ಪತ್ನಿ ಬದಲಿ ಭೂಮಿ ಕೇಳಿದ್ದು ತನ್ನದೇ ಜಮೀನನ್ನು. ಸತ್ಯ ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಅಂತ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.