ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ, ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದ್ದು, ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪತ್ರಕರ್ತರ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದೆ. ಸರ್ಕಾರದಿಂದ ಪುನಾರಚಿತಗೊಂಡಿರುವ ಸಮಿತಿ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಅಕಾಡೆಮಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದೆ. ಆ ದಿಸೆಯಲ್ಲಿ ಮಾಧ್ಯಮ ಕಚೇರಿಗಳ ಸಹಕಾರವನ್ನು ಪಡೆದು ಪತ್ರಕರ್ತರ (Journalists) ಕೌಶಲ್ಯಾಭಿವೃದ್ಧಿಗೆ ತರಬೇತಿ ಹಮ್ಮಿಕೊಳ್ಳುವುದು ಅಕಾಡೆಮಿಯ ಹೊಸ ಯೋಜನೆಯಾಗಿದೆ. 20ಸಾವಿರ ಶಿಷ್ಯವೇತನ! ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿ ಮುಗಿಸಿ ಹೊರ ಬರುವ ವಿದ್ಯಾರ್ಥಿಗಳಿಗೆ ಮಾಧ್ಯಮ ಕಚೇರಿಯ ಎಲ್ಲಾ ವಿಭಾಗಗಳಲ್ಲಿ ತರಬೇತಿಯನ್ನು ಕೊಡಿಸುವ ಮೂಲಕ, ತರಬೇತಿ ಹೊಂದಿದ ವಿದ್ಯಾರ್ಥಿಗಳು ಪತ್ರಕರ್ತರಾಗುವಂತೆ ಸಿದ್ಧಪಡಿಸುವುದು ಅಕಾಡೆಮಿಯ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು ಮಾಸಿಕ ತಲಾ 20,000 ರೂಪಾಯಿ ಶಿಷ್ಯವೇತನ ನೀಡಲಾಗುವುದು. ಇದನ್ನೂ ಓದಿ: Guidelines: ಪಿಜಿಗಳಿಗೆ ಬಿಬಿಎಂಪಿಯಿಂದ ಹೊಸ ಗೈಡ್‌ಲೈನ್ಸ್ ಪ್ರಕಟ; ಈ ಎಲ್ಲ ಸವಲತ್ತು ಇರಲೇಬೇಕು! ಅರ್ಜಿ ಸಲ್ಲಿಕೆ ಹೇಗೆ? ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳಿಗೆ ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಲು ಕೋರಿದೆ. ಇದನ್ನೂ ಓದಿ: Neeraj Chopra: ನೀರಜ್ ಮಾಡಿದ ಆ ಒಂದು ತಪ್ಪು ನದೀಂಗೆ ಲಾಭವಾಯಿತು; ಇದು ಗೋಲ್ಡನ್ ಬಾಯ್ ಮಾಜಿ ಕೋಚ್ ಅಭಿಪ್ರಾಯ! 28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು. ಕನ್ನಡ ಸುದ್ದಿ / ನ್ಯೂಸ್ / ಬೆಂಗಳೂರು ನಗರ / Bengaluru: ಜರ್ನಲಿಸಂ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 20 ಸಾವಿರ ರೂಪಾಯಿ ಶಿಷ್ಯವೇತನದ ಜೊತೆಗೆ ಪತ್ರಕರ್ತರಾಗಿ! Bengaluru: ಜರ್ನಲಿಸಂ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 20 ಸಾವಿರ ರೂಪಾಯಿ ಶಿಷ್ಯವೇತನದ ಜೊತೆಗೆ ಪತ್ರಕರ್ತರಾಗಿ! ವಿದ್ಯಾರ್ಥಿಗಳಿಗೆ ಶಿಷ್ಯವೇತನ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿದ್ಯಾರ್ಥಿನಿಯರಿಗೆ ಶಿಷ್ಯವೇತನದ ಜೊತೆಗೆ ತರಬೇತಿ ನೀಡಲಿದೆ. ಮುಂದೆ ಓದಿ … 2-MIN READ Kannada Last Updated : August 9, 2024, 8:04 pm IST Whatsapp Facebook Telegram Twitter Follow us on Follow us on google news Published By : Irshad Kinnigoli Reported By : Irshad Kinnigoli ಸಂಬಂಧಿತ ಸುದ್ದಿ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ, ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದ್ದು, ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪತ್ರಕರ್ತರ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದೆ. ಸರ್ಕಾರದಿಂದ ಪುನಾರಚಿತಗೊಂಡಿರುವ ಸಮಿತಿ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಅಕಾಡೆಮಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದೆ. ಆ ದಿಸೆಯಲ್ಲಿ ಮಾಧ್ಯಮ ಕಚೇರಿಗಳ ಸಹಕಾರವನ್ನು ಪಡೆದು ಪತ್ರಕರ್ತರ (Journalists) ಕೌಶಲ್ಯಾಭಿವೃದ್ಧಿಗೆ ತರಬೇತಿ ಹಮ್ಮಿಕೊಳ್ಳುವುದು ಅಕಾಡೆಮಿಯ ಹೊಸ ಯೋಜನೆಯಾಗಿದೆ. 20ಸಾವಿರ ಶಿಷ್ಯವೇತನ! ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿ ಮುಗಿಸಿ ಹೊರ ಬರುವ ವಿದ್ಯಾರ್ಥಿಗಳಿಗೆ ಮಾಧ್ಯಮ ಕಚೇರಿಯ ಎಲ್ಲಾ ವಿಭಾಗಗಳಲ್ಲಿ ತರಬೇತಿಯನ್ನು ಕೊಡಿಸುವ ಮೂಲಕ, ತರಬೇತಿ ಹೊಂದಿದ ವಿದ್ಯಾರ್ಥಿಗಳು ಪತ್ರಕರ್ತರಾಗುವಂತೆ ಸಿದ್ಧಪಡಿಸುವುದು ಅಕಾಡೆಮಿಯ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು ಮಾಸಿಕ ತಲಾ 20,000 ರೂಪಾಯಿ ಶಿಷ್ಯವೇತನ ನೀಡಲಾಗುವುದು. ಜಾಹೀರಾತು ಇದನ್ನೂ ಓದಿ: Guidelines: ಪಿಜಿಗಳಿಗೆ ಬಿಬಿಎಂಪಿಯಿಂದ ಹೊಸ ಗೈಡ್‌ಲೈನ್ಸ್ ಪ್ರಕಟ; ಈ ಎಲ್ಲ ಸವಲತ್ತು ಇರಲೇಬೇಕು! ಅರ್ಜಿ ಸಲ್ಲಿಕೆ ಹೇಗೆ? ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳಿಗೆ ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಲು ಕೋರಿದೆ. ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಚಿನ್ನದ ಹುಡುಗ! ಇನ್ನಷ್ಟು ಸುದ್ದಿ… ಇದನ್ನೂ ಓದಿ: Neeraj Chopra: ನೀರಜ್ ಮಾಡಿದ ಆ ಒಂದು ತಪ್ಪು ನದೀಂಗೆ ಲಾಭವಾಯಿತು; ಇದು ಗೋಲ್ಡನ್ ಬಾಯ್ ಮಾಜಿ ಕೋಚ್ ಅಭಿಪ್ರಾಯ! ಜಾಹೀರಾತು 28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು. Whatsapp Facebook Telegram Twitter Follow us on Follow us on google news ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ Tags: Bengaluru , journalism , Local 18 First Published : August 9, 2024, 8:04 pm IST ಮುಂದೆ ಓದಿ None
Popular Tags:
Share This Post:
What’s New
Spotlight
Today’s Hot
-
- January 7, 2025
-
- January 7, 2025
-
- January 7, 2025
Featured News
Latest From This Week
Subscribe To Our Newsletter
No spam, notifications only about new products, updates.