ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಸೋಮವಾರ ದೂರವಾಣಿ ಸಂಭಾಷಣೆ (Telephonic Conversation) ನಡೆಸಿದರು. ಯುದ್ಧದಿಂದ ಹಾನಿಗೊಳಗಾದ ಉಕ್ರೇನ್‌ನಲ್ಲಿ (Ukraine) ಶಾಂತಿ ಸ್ಥಾಪನೆ ಪ್ರಯತ್ನಗಳು ಮತ್ತು ಈ ತಿಂಗಳ ಆರಂಭದಲ್ಲಿ ಆಡಳಿತ ಬದಲಾವಣೆಯ ನಂತರ ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ (Hindus) ಸುರಕ್ಷತೆ (Safety) ಸೇರಿದಂತೆ ವ್ಯಾಪಕವಾದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿದರು. ಉಭಯ ನಾಯಕರು ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಸಂಬಂಧಗಳ ಬಗ್ಗೆಯೂ ಚರ್ಚಿಸಿದರು. ಜಾಗತಿಕ ಸಮಸ್ಯೆಗಳ ಕುರಿತು ಚರ್ಚೆ ಪ್ರಧಾನಿ ಮೋದಿ ಅವರು ಇತ್ತೀಚೆಗೆ ಕೈವ್ ಪ್ರವಾಸದಿಂದ ಹಿಂದಿರುಗಿದ್ದು, ಅಲ್ಲಿ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ಭೇಟಿಯಾದರು ಮತ್ತು ಸಂಘರ್ಷಗಳಿಗೆ ಯುದ್ಧಭೂಮಿಯಲ್ಲಿ ಪರಿಹಾರಗಳನ್ನು ಕಂಡುಹಿಡಿಯಲು ಆಗುವುದಿಲ್ಲ ಎಂದು ಪುನರುಚ್ಚರಿಸಿದರು. ‘ಇಂದು ಫೋನ್‌ನಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಮಾತನಾಡಿದೆ. ಉಕ್ರೇನ್‌ನಲ್ಲಿನ ಪರಿಸ್ಥಿತಿ ಸೇರಿದಂತೆ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ನಾವು ವಿವರಗಿ ವಿಚಾರ ವಿನಿಮಯ ನಡೆಸಿದ್ದೇವೆ. ಶಾಂತಿ ಮತ್ತು ಸ್ಥಿರತೆಯ ಶೀಘ್ರ ವಾಪಸಾತಿಗೆ ಭಾರತದ ಸಂಪೂರ್ಣ ಬೆಂಬಲವನ್ನು ನಾನು ಪುನರುಚ್ಚರಿಸಿದೆ’ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದರು. ಇದನ್ನೂ ಓದಿ: ಭಾರತ ಎಂದಿಗೂ ತಟಸ್ಥವಾಗಿರಲಿಲ್ಲ, ನಾವು ಶಾಂತಿಯ ಪರ; ಉಕ್ರೇನ್‌ನಲ್ಲಿ ಪ್ರಧಾನಿ ಮೋದಿ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮಾತುಕತೆ ಬೈಡನ್ ಅವರಿಂದ ಬಂದ ಫೋನ್ ಕರೆಯಲ್ಲಿ, ಪಿಎಂ ಮೋದಿ ಬಾಂಗ್ಲಾದೇಶದ ಪರಿಸ್ಥಿತಿ ಮತ್ತು ದೇಶದ ಬಂಗಾಳಿ ಹಿಂದೂ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆಯೂ ಚರ್ಚಿಸಿದರು. ‘ನಾವು ಬಾಂಗ್ಲಾದೇಶದ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ ಮತ್ತು ಸಹಜತೆಯನ್ನು ಶೀಘ್ರವಾಗಿ ಮರುಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳಿದ್ದೇವೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳುತ್ತೇವೆ’ ಎಂದು ಮೋದಿ ಮಾಹಿತಿ ನೀಡಿದ್ದಾರೆ. Spoke to @POTUS @JoeBiden on phone today. We had a detailed exchange of views on various regional and global issues, including the situation in Ukraine. I reiterated India’s full support for early return of peace and stability. We also discussed the situation in Bangladesh and… ಶಾಂತಿ ಸ್ಥಾಪನೆ ಬಗ್ಗೆ ಉಭಯ ನಾಯಕರು ಚರ್ಚೆ ‘ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಚರ್ಚಿಸುವಾಗ, ಪ್ರಧಾನಿ ಮೋದಿ ಅವರು ಬೈಡನ್ ಅವರಿಗೆ ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ವಿವರಿಸಿದರು. ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ಸ್ಥಿರವಾದ ನಿಲುವನ್ನು ಪುನರುಚ್ಚರಿಸಿದರು. ಶಾಂತಿ ಮತ್ತು ಸ್ಥಿರತೆ ಮರಳುವಿಕೆಗೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಉಭಯ ನಾಯಕರು ತಮ್ಮ ಕಳವಳವನ್ನು ವ್ಯಕ್ತಪಡಿಸಿದರು. ಅವರು ಕಾನೂನು ಮತ್ತು ಸುವ್ಯವಸ್ಥೆಯನ್ನು ಮರುಸ್ಥಾಪಿಸಲು ಮತ್ತು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವ ಬಗ್ಗೆ ಚರ್ಚೆ ನಡೆಸಿದರು’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭಾರತ ಯಾವಾಗಲೂ ನಿಮ್ಮೊಂದಿಗಿದೆ ಇತ್ತೀಚೆಗೆ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ನಡೆದ ಮೂರು ಗಂಟೆಗಳ ಸಭೆಯಲ್ಲಿ ಬೇಗನೆ ಶಾಂತಿಗೆ ಮರಳಲು ಅನುಕೂಲವಾಗುವ ಭಾರತದ ಇಚ್ಛೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದರು. ಸಂಘರ್ಷವನ್ನು ಪರಿಹರಿಸುವ ಸಾಧನಗಳಾಗಿ ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಪರಸ್ಪರ ತೊಡಗಿಸಿಕೊಳ್ಳುವಂತೆ ಒತ್ತಾಯಿಸಿದ್ದರು. ‘ಮಾನವೀಯ ದೃಷ್ಟಿಕೋನದಿಂದ ಯಾವುದೇ ಅಗತ್ಯವಿದ್ದರೂ, ಭಾರತ ಯಾವಾಗಲೂ ನಿಮ್ಮೊಂದಿಗೆ ನಿಲ್ಲುವುದು ಮಾತ್ರವಲ್ಲ ಎರಡು ಹೆಜ್ಜೆ ಮುಂದೆ ಇರುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ’ ಎಂದು ಮೋದಿ ಹೇಳಿದ್ದರು. ಉಕ್ರೇನ್ ಭಾರತದ ಸಹಕಾರ ಬಯಸುತ್ತದೆ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಉಕ್ರೇನ್ ಶಾಂತಿ ಶೃಂಗಸಭೆಯ ಮೂಲಕ ಈ ಪ್ರದೇಶದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವ ಪ್ರಕ್ರಿಯೆಯಲ್ಲಿ ಭಾರತದ ನಿರಂತರ ಸಹಕಾರವನ್ನು ಉಕ್ರೇನ್ ಬಯಸುತ್ತದೆ ಎಂದು ಹೇಳಿದ್ದರು. None
Popular Tags:
Share This Post:
What’s New
Spotlight
Today’s Hot
-
- December 20, 2024
-
- December 20, 2024
-
- December 20, 2024
CT Ravi Release: ಈಗ ಎಲ್ಲಿದ್ದಾರೆ ಸಿಟಿ ರವಿ? ಅಲ್ಲಿಂದಲೇ ರಿಲೀಸ್ ಆಗ್ತಾರಾ?
- By Sarkai Info
- December 20, 2024
Featured News
CT Ravi: ಬಂಧನವಾದ 24 ಗಂಟೆಯೊಳಗೆ ಸಿಟಿ ರವಿ ಬಿಡುಗಡೆ! ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ!
- By Sarkai Info
- December 20, 2024
Latest From This Week
Max Movie: ಕಿಚ್ಚನ ಮ್ಯಾಕ್ಸ್ ಚಿತ್ರದಲ್ಲಿ ಲೇಡಿ ವಿಲನ್! ಯಾರು ಆ ಖಳ ನಾಯಕಿ?
NEWS
- by Sarkai Info
- December 20, 2024
Subscribe To Our Newsletter
No spam, notifications only about new products, updates.
Popular News
Top Picks
CT Ravi: ಸಿಟಿ ರವಿಗೆ ಮುಂದುವರೆದ ಸಂಕಷ್ಟ! ಬೇಲ್ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್
- December 20, 2024