NEWS

Prajwal Revanna: ಜೈಲಲ್ಲಿರೋ ಪ್ರಜ್ವಲ್ ರೇವಣ್ಣಗೆ ಇಂದು ಅಗ್ನಿಪರೀಕ್ಷೆ! ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮತ್ತೊಮ್ಮೆ ಶಾಕ್!

ಸಾಂದರ್ಭಿಕ ಚಿತ್ರ ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಹಾಸನದ (Hassan) ಮಾಜಿ ಸಂಸದ (Former MP) ಪ್ರಜ್ವಲ್‌ ರೇವಣ್ಣಗೆ (Prajwal Revanna) ಇದೀಗ ನಿಜವಾದ ಅಗ್ನಿ ಪರೀಕ್ಷೆ ಎದುರಾಗಿದೆ. ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಟ್ರಯಲ್ (trial) ಪ್ರಾರಂಭಿಸಲು ಎಸ್​ಐಟಿ ಮುಂದಾಗಿದೆ ಎಂದು ತಿಳಿದುಬಂದಿದ್ದು, ಜಾಮೀನು ಸಿಗದೇ ಜೈಲಿನಲ್ಲಿ ಇರೋ ಪ್ರಜ್ವಲ್‌ಗೆ ಸಂಕಷ್ಟ ಶುರುವಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ವಜಾ ಬಳಿಕ ಇದೀಗ ಮತ್ತೊಮ್ಮೆ ಶಾಕ್‌ ಎಸ್​ಐಟಿ ತಂಡ ಇಂದು ಪ್ರಜ್ವಲ್ ರೇವಣ್ಣ ವಿರುದ್ಧ ಚಾರ್ಜ್‌ಪ್ರೇಮ್ ಮಾಡಲಿದ್ದು, ಟ್ರಯಲ್ ಪ್ರಾರಂಭಿಸಲು ಮುಂದಾಗಿದೆ. ಆರು ತಿಂಗಳ ಹಿಂದೆ ಬಂಧನವಾಗಿದ್ದ ಪ್ರಜ್ವಲ್ ರೇವಣ್ಣ ಅಂದಿನಿಂದ ಜೈಲಿನಲ್ಲಿ ಇದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆದ ಬಳಿಕ ಇದೀಗ ಮತ್ತೊಮ್ಮೆ ಶಾಕ್‌ ಎದುರಾಗಿದೆ. ದೋಷಾರೋಪ ಪಟ್ಟಿಯ ಮೇಲೆ ಟ್ರಯಲ್ ಪ್ರಾರಂಭ ಕಳೆದೆರಡು ದಿನಗಳ ಹಿಂದೆ ಎಸ್ ಪಿಪಿ ಗೈರು ಆದ ಹಿನ್ನಲೆ ನ್ಯಾಯಾಲಯ ವಿಚಾರಣೆ ಮುಂದೂಡಿತ್ತು. ಇಂದು ಚಾರ್ಜ್ ಪ್ರೇಮ್ ಮಾಡಿ ಟ್ರಯಲ್ ಪ್ರಾರಂಭ ಆಗಲಿದೆ. ಪರಪ್ಪನ ಅಗ್ರಹಾರದಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಯಲದ ಮುಂದೆ ಪ್ರಜ್ವಲ್ ರೇವಣ್ಣ ಹಾಜರುಪಡಿಸಲಿದ್ದಾರೆ. ನ್ಯಾಯಾಲಯದ ಮುಂದೆ ಹಾಜರುಪಡಿಸಿ ದೋಷಾರೋಪ ಪಟ್ಟಿಯ ಮೇಲೆ ಟ್ರಯಲ್ ಪ್ರಾರಂಭವಾಗುತ್ತದೆ. ಜಾಮೀನು ಸಿಗುವ ಮುನ್ನ ಟ್ರಯಲ್ ಆರಂಭಿಸಲು ಎಸ್ ಐಟಿ ಸಿದ್ದವಾಗಿದೆ. ಇದನ್ನೂ ಓದಿ: HMPV Virus: ಎಚ್ಚರ ಎಚ್ಚರ! ಬೆಂಗಳೂರಿನಲ್ಲೂ ಕಾಣಿಸಿಕೊಂಡ HMPV ವೈರಸ್! 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆ ಎಸ್‌ಐಟಿ ಅಧಿಕಾರಿಗಳ ಪರ ವಕೀಲರು ಗೈರಾಗಿದ್ದಕ್ಕೆ ವಿಚಾರಣೆ ಮುಂದೂಡಿದ್ದ ಕೋರ್ಟ್ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ.4ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಅರ್ಜಿ ವಿಚಾರಣೆ ನಡೆಸಲು ಮುಂದಾಗಿತ್ತು. ಆದರೆ ಎಸ್‌ಐಟಿ ಅಧಿಕಾರಿಗಳ ಪರ ವಕೀಲರು ಕೋರ್ಟ್‌ಗೆ ಹಾಜರಾಗದಿದ್ದಕ್ಕೆ ಅರ್ಜಿ ವಿಚಾರಣೆಯನ್ನು ಜ. 6ಕ್ಕೆ ಮುಂದೂಡಲಾಗಿತ್ತು. ಏನಿದು ಪ್ರಕರಣ? ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಆತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರು ತಿಂಗಳ ಹಿಂದೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಂದಿನಿಂದ ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದರು. ಪ್ರಭಾವಿ ಎಂದು ಜಾಮೀನು ಅರ್ಜಿ ವಜಾ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಪ್ರಜ್ವಲ್ ಪರ ಹಿರಿಯ ವಕೀಲ ಮುಕುಲ್ ರೋಹಟ್ಗಿ ವಾದ ಮಂಡಿಸಿದರು. ಚುನಾವಣೆಗೆ ಆರೋಪಿ ಸ್ಪರ್ಧೆ ಮಾಡಿದ್ರು, ಈ ವೇಳೆ ಆರೋಪ ಮಾಡಲಾಗಿದೆ. ಡ್ಯಾಮೇಜ್ ಮಾಡಲು ಆರೋಪ ಮಾಡಲಾಗಿದೆ. ಹಾಗಾಗಿ ಜಾಮೀನು ನೀಡುವಂತೆ ರೋಹಟ್ಗಿ ವಾದ ಮಂಡಿಸಿದರು. ಆದರೆ ಸುಪ್ರೀಂ ಕೋರ್ಟ್ ಮಾತ್ರ, ಆರೋಪಿ ಪ್ರಭಾವಿಯಾಗಿದ್ದಾನೆ ಎಂದು ಜಾಮೀನು ಅರ್ಜಿ ವಜಾಗೊಳಿಸಿತು. 6 ತಿಂಗಳ ನಂತರ ಮತ್ತೆ ಜಾಮೀನು ಸಲ್ಲಿಸಬಹುದೇ..? ಎಂದು ರೋಹ್ಟಗಿ ಪ್ರಶ್ನೆ ಮಾಡಿದರು. ಅದಕ್ಕೆ ಸುಪ್ರೀಂ, ಇದಕ್ಕೆ ನಾವೇನು ಹೇಳುವುದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: Amit Shah: ಅಮಿತ್ ಶಾ ಹೇಳಿಕೆ ಖಂಡಿಸಿ ಬಂದ್‌ಗೆ ಕರೆ; ಸಂಜೆ 6ರವರೆಗೆ ಇಲ್ಲಿ ಬಸ್ ಸಂಚಾರ ಇರಲ್ಲ, ಶಾಲಾ ಕಾಲೇಜುಗಳಿಗೆ ರಜೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಪ್ರಜ್ವಲ್! ಕಳೆದ ಅಕ್ಟೋಬರ್‌ 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು. ಪ್ರಜ್ವಲ್‌ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣವಿರುದ್ಧ ಕಳೆದ ಏಪ್ರಿಲ್‌ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು. ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿತ್ತು. 2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದರು. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದರು. (ವರದಿ: ಗಂಗಾಧರ್ ಆಂಜನಪ್ಪ, ನ್ಯೂಸ್ 18 ಕನ್ನಡ, ಬೆಂಗಳೂರು) None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.