NEWS

Muda Scam: ಹೆಲಿಕ್ಯಾಪ್ಟರ್‌ನಲ್ಲಿ ಮುಡಾ ದಾಖಲೆ ಹೊತ್ತೊಯ್ದರಾ ಬೈರತಿ ಸುರೇಶ್? ಸಚಿವರಿಗೂ ಶುರುವಾಯ್ತು ಮುಡಾ ಸಂಕಷ್ಟ!

ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ದೂರು ಮೈಸೂರು: ಮುಡಾ ಹಗರಣವು (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ದಿನ ನಿತ್ಯವು ಒಂದಲ್ಲಾ ಒಂದು ರೀತಿಯಲ್ಲಿ ಕಾಡುತ್ತಿದೆ. ಅದರಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ದೂರು ದಾಖಲಿಸಿದ್ದಾರೆ. ಸಚಿವ ಬೈರತಿ ಸುರೇಶ್ (Byrathi Suresh) ಮತ್ತು ಹಿಂದಿನ ಲೋಕಾಯುಕ್ತ ಎಸ್. ​​ಪಿ. ಸಜಿತ್ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ದೂರು ನೀಡಿದ್ದಾರೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್​​ ಮೋಹನ್​​ ಅವರಿಗೆ ದೂರು ನೀಡಿದ್ದಾರೆ. ಹೆಲಿಕ್ಯಾಪ್ಟರ್‌ನಲ್ಲಿ ಆಗಮಿಸಿ‌ ದಾಖಲೆ ತಗೆದುಕೊಂಡಿದ್ದಾರೆ ಲೋಕಾಯುಕ್ತ ನೀಡಿದ್ದ ಸರ್ಚ್​ ವಾರಂಟ್​ ಆಧರಿಸಿ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ದಾಳಿ ವಿಚಾರವನ್ನು ಮೈಸೂರು ಲೋಕಾಯುಕ್ತದ ಅಂದಿನ ಅಧೀಕ್ಷಕ ಸಜಿತ್ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರಿಗೆ ಮಾಹಿತಿ ನೀಡಿದ್ದರು. ಇದರಿಂದ ಬೈರತಿ ಸುರೇಶ್ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕ್ಯಾಪ್ಟರ್‌ನಲ್ಲಿ ಆಗಮಿಸಿ‌ 26-7-2024 ರಂದು ಮುಡಾದ ದಾಖಲೆಗಳನ್ನ ಕೊಂಡೊಯ್ಯದಿದ್ದಾರೆ ಎಂದು ಆರೋಪಿಸಿದರು. ಲೋಕಾಯುಕ್ತ ಎಸ್ಪಿ ಇಂದ ಸಹಕಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಅದೇ ದಾಖಲೆಗಳನ್ನ ಬಿಡುಗಡೆ ಮಾಡಿದ್ದಾರೆ. ಸಚಿವರು ದಾಖಲೆಗಳನ್ನ ತೆಗೆದುಕೊಂಡು‌ ಹೋಗಲು ಲೋಕಾಯುಕ್ತ ಎಸ್ಪಿ ಸಹಕರಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಸಾವರ್ಕರ್ ವಿರುದ್ಧದ ಗೋಮಾಂಸ ಹೇಳಿಕೆ; ಉಲ್ಟಾ ಹೊಡೆದ ದಿನೇಶ್ ಗುಂಡೂರಾವ್! ಜಿಟಿ ದೇವೇಗೌಡ ಆಯ್ತು, ಈಗ ಬಿಜೆಪಿ ನಾಯಕರ ಸರದಿ! ಚಿಕ್ಕೋಡಿ: ರಾಜ್ಯ ರಾಜಕಾರಣದಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರ ಹೇಳಿಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸದ್ಯ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಮುಡಾ ವಿಚಾರ ಸಿಎಂ ವಿರುದ್ಧ ತನಿಖೆ ನಡೆಯುತ್ತಿದ್ದು, ಈ ನಡುವೆ ಹಲವು ನಾಯಕರು ಸಿಎಂ ಪರ ಮಾತನಾಡುತ್ತಿದ್ದಾರೆ. ವಿಶೇಷವೇನೆಂದರೆ ವಿರೋಧ ಪಕ್ಷದ ನಾಯಕರು ಸಿದ್ದರಾಮಯ್ಯ ಪರ ಮಾತನಾಡುತ್ತಿರುವುದು ಬಹಳ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಸದ್ಯ ಜೆಡಿಎಸ್‌ನ ಜಿಟಿ ದೇವೇಗೌಡ ಅವರು ಸಿಎಂ ಪರ ಮಾತನಾಡಿದ್ದರು. ಇದೀಗ ಬಿಜೆಪಿ ಅವರ ಸರದಿ ಬಂದಿದೆ. ಸಿಎಂ ಸಿದ್ದರಾಮಯ್ಯ ಅವರು ಸ್ವಚ್ಚ ಧಕ್ಷ ಆಡಳಿತಗಾರ ಎಂದು ಬಿಜೆಪಿ ಮಾಜಿ ಸಂಸದ ಹೇಳಿದ್ದಾರೆ. ಬಿಜೆಪಿ ಮಾಜಿ ಸಂಸದನಿಂದ ಸಿಎಂ ಗುಣಗಾನ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದರಾದ ರಮೇಶ್ ಕತ್ತಿ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯ ಒಬ್ಬ ಒಳ್ಳೆ ವ್ಯಕ್ತಿ. ಈಗ ಅವರ ಮೇಲೆ ಮುಡಾ ಹಗರಣದ ಸಂಬಂಧ ಅವರ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಇಂದಿನ ರಾಜಕಾರಣ ಬಹಳ ಬದಲಾವಣೆ ಆಗಿದೆ ಎಂದು ಬಿಜೆಪಿ ಮಾಜಿ ಸಂಸದ ರಮೇಶ ಕತ್ತಿ ಅವರು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಸಿಎಂ ಪರ ಮಾತನಾಡಿದ್ದಾರೆ. (ವರದಿ: ಆನಂದ, ನ್ಯೂಸ್​ 18 ಕನ್ನಡ) None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.