ಸಾಂದರ್ಭಿಕ ಚಿತ್ರ ಬೆಂಗಳೂರು(ಆಗಸ್ಟ್ 17): ಕರ್ನಾಟಕದಲ್ಲಿ 2ನೇ ಹಂತದ ಮುಂಗಾರು ಆಗಸ್ಟ್ 16ರಿಂದ ಪ್ರಾರಂಭವಾಗಿದೆ. ರಾಜ್ಯದ ವಿವಿಧೆಡೆ ಆಗಸ್ಟ್ 20ರವರೆಗೆ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ಹೇಗಿರಲಿದೆ ವಾತಾವರಣ? ದಿನ 1 : ಆಗಸ್ಟ್ 17 (ಇಂದು) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. • ಬೀದರ್, ಬಾಗಲಕೋಟೆ, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. • ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. • ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. • ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಿನ 2 -ಆಗಸ್ಟ್ 18 (ನಾಳೆ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. • ಬೆಳಗಾವಿ, ಧಾರವಾಡ, ವಿಜಯಪುರ, ಗದಗ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. • ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. • ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಿನ 3 - ಆಗಸ್ಟ್ 19 ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. • ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. • ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಿನ 4 -ಆಗಸ್ಟ್ 20 ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. • ಉಡುಪಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. • ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. • ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. • ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಿನ 5 -ಆಗಸ್ಟ್ 21 ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. • ಉಡುಪಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. • ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. • ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಿನ 6- ಆಗಸ್ಟ್ 22 ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಿನ 7 - ಆಗಸ್ಟ್ 23 ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 21 ° C ಆಗಿರಬಹುದು. ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 21 ° C ಆಗಿರಬಹುದು. None
Popular Tags:
Share This Post:
What’s New
Spotlight
Today’s Hot
-
- January 7, 2025
-
- January 7, 2025
-
- January 7, 2025
Featured News
Latest From This Week
Subscribe To Our Newsletter
No spam, notifications only about new products, updates.