NEWS

Ayodhya Diwali 2024: ಅಯೋಧ್ಯೆಯ ರಾಮ ಮಂದಿರದಲ್ಲಿ ದೀಪಾವಳಿ ಅಲಂಕಾರಕ್ಕೆ ಚೈನೀಸ್ ವಸ್ತು ಬಳಸುವುದಿಲ್ಲ: ಟ್ರಸ್ಟ್

ಅಯೋಧ್ಯೆಯಲ್ಲಿ ದೀಪಾವಳಿಗೆ ತಯಾರಿ ಅಯೋಧ್ಯೆ(ಅ.30): ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರವನ್ನು ನಿರ್ವಹಿಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಸ್ಥಳೀಯ ಕರಕುಶಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಬಾರಿಯ ದೀಪಾವಳಿಯಂದು ನಗರದ ಅಲಂಕಾರಕ್ಕೆ ಚೀನಾ ನಿರ್ಮಿತ ವಸ್ತುಗಳನ್ನು ಬಳಸದಿರಲು ನಿರ್ಧರಿಸಿದೆ. ಅಯೋಧ್ಯೆಯಾದ್ಯಂತ ಈ ವರ್ಷ ಬೆಳಕಿನ ಮಹಾ ಹಬ್ಬದ ಸಂಭ್ರಮಕ್ಕೆ ತಯಾರಿ ನಡೆಸಲಾಗುತ್ತಿದೆ. ಇಂತಹುದ್ದೊಂದು ಕಾರ್ಯಕ್ರಮ ಇಲ್ಲಿ ನಡೆಯುತ್ತಿರುವುದು ಇದು ಎಂಟನೇ ಬಾರಿ. ಅದರಲ್ಲೂ ವಿಶೇಷವಾಗಿ ಈ ವರ್ಷದ ಜನವರಿಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ ಬಳಿಕ ಮೊದಲ ಬಾರಿಗೆ ಇಲ್ಲಿ ದೀಪೋತ್ಸವ ಆಚರಿಸಲಾಗುತ್ತದೆ. ಹೀಗಾಗಿ ದೇವಾಲಯದ ಆವರಣವನ್ನು ದೀಪಗಳು ಮತ್ತು ಇತರ ವಸ್ತುಗಳಿಂದ ಅಲಂಕರಿಸಲಾಗುತ್ತದೆ. ಈ ಬಗ್ಗೆ ಹೇಳಿಕೆ ನೀಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೀಪಾವಳಿಯ ಸಮಯದಲ್ಲಿ ಅಲಂಕಾರಕ್ಕಾಗಿ ಚೈನೀಸ್ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಿದೆ, ಸ್ಥಳೀಯ ಕರಕುಶಲತೆ ಮತ್ತು ಸ್ವಾವಲಂಬನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, “ವೋಕಲ್ ಫಾರ್ ಲೋಕಲ್” (ಆತ್ಮನಿರ್ಭರ ಭಾರತ)ದ ಕನಸಿಗೆ ಮತ್ತಷ್ಟು ಬಲ ತುಂಬುತ್ತದೆ ಎಂದು ತಿಳಿಸಿದೆ. ದೀಪೋತ್ಸವ ಕಾರ್ಯಕ್ರಮದ ಭದ್ರತೆ ಕುರಿತಾಗಿ ಮಾಹಿತಿ ನೀಡಿರುವ ಇಲ್ಲಿನ ಪೊಲೀಸ್ ಇಲಾಖೆ ಸುರಕ್ಷತೆ ಕಾಪಾಡಿಕೊಳ್ಳಲು ಸುಮಾರು 10,000 ಭದ್ರತಾ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು ಮತ್ತು ಅವರಲ್ಲಿ ಅರ್ಧದಷ್ಟು ಅಧಿಕಾರಿಗಳು “ಮಫ್ತಿ” ಅಂದರೆ ಸಾಮಾನ್ಯ ಬಟ್ಟೆಯಲ್ಲಿರುತ್ತಾರೆ ಎಂದು ತಿಳಿಸಿದೆ. ರಾಮಮಂದಿರದಲ್ಲಿ ಚೀನಾದ ಅಲಂಕಾರಿಕ ವಸ್ತುಗಳನ್ನು ಬಳಸದಿರುವ ನಿರ್ಧಾರದ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಅಯೋಧ್ಯೆಯ ಆಯುಕ್ತ ಗೌರವ್ ದಯಾಳ್, “ಮೂಲತಃ ನಾವು ಸ್ಥಳೀಯ ವಸ್ತುಗಳನ್ನು ಮಾತ್ರ ಬಳಸಲು ನಿರ್ಧರಿಸಿದ್ದೇವೆ. ಚೀನೀ ವಸ್ತುಗಳನ್ನು ಬಳಸುವುದಿಲ್ಲ ಎಂದು ಅವರು ಹೇಳುತ್ತಿದ್ದಾರೆ. ಈ ಮೂಲಕ ಇಡೀ ಕಲ್ಪನೆಯು ಸ್ಥಳೀಯ ಕುಶಲಕರ್ಮಿಗಳು, ಸ್ಥಳೀಯ ಕಲಾವಿದರನ್ನು ಉತ್ತೇಜಿಸುವುದರೊಂದಿಗೆ ಇದು ಪರಿಸರ ಸ್ನೇಹಿಯಾಗಿರುವುದರಿಂದಿಗೆ ಸ್ಥಳೀಯ ವಸ್ತುಗಳನ್ನು ಬಳಕೆಯನ್ನೂ ಹೆಚ್ಚಿಸುತ್ತದೆ.” “ಚೈನೀಸ್ ಸಾಮಗ್ರಿ ಬಳಸದಂತೆ ಜನರಿಗೆ ಮನವಿ ಅಥವಾ ಸೂಚನೆ ನೀಡಲಾಗಿದೆಯಾ?” ಎಂಬ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು ಇದು ಜನರ ಮೇಲೆ ಅವಲಂಬಿತವಾಗಿದೆ. ಈ ವಿಚಾರದಲ್ಲಿ ನಾವು ಜನರನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಇನ್ನು ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿಯ ಒಂದು ದಿನ ಮುಂಚಿತವಾಗಿ ಅಂದರೆ ಬುಧವಾರದಂದು ದೀಪೋತ್ಸವವನ್ನು ಆಯೋಜಿಸಲಾಗಿದೆ. ಈ ವರ್ಷವೂ ಇಲ್ಲಿ ಏಕಕಾಲದಲ್ಲಿ ಅತಿ ಹೆಚ್ಚು ದೀಪಗಳನ್ನು ಬೆಳಗಿಸುವ ಮೂಲಕ ಗಿನ್ನಿಸ್ ದಾಖಲೆ ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇನ್ನು ಹಗಲು ಹೊತ್ತು ಇಲ್ಲಿ ರಾಮ್ ಲೀಲಾ ಮತ್ತು ಇತರ ರೀತಿಯ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಮಾಧ್ಯಮ ಪ್ರಕಟಣೆಯ ಪ್ರಕಾರ, “ಪ್ರಸಿದ್ಧ ಫ್ಯಾಷನ್ ಡಿಸೈನರ್ ಮನೀಶ್ ಮಲ್ಹೋತ್ರಾ ಅವರಿಗೆ ರಾಮ್ ಲೀಲಾ ಮತ್ತು ಅವರ ಸಹೋದರರ ವಿಶೇಷ ಬಟ್ಟೆಗಳನ್ನು ವಿನ್ಯಾಸಗೊಳಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ, ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಫ್ಯಾಷನ್ ಮತ್ತು ಆಧ್ಯಾತ್ಮಿಕತೆಯ ಮಿಶ್ರಣವನ್ನು ಇದು ಪ್ರದರ್ಶಿಸುತ್ತದೆ” None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.