NEWS

Siddaramaiah-HDK: ಗುತ್ತಿಗೆದಾರರಿಗೆ ಬಾಕಿ ಬಿಲ್ ಕೊಡಿಸ್ತೀರಾ? ದಯಾಮರಣ ಕರುಣಿಸ್ತೀರಾ? ಸಿಎಂ ವಿರುದ್ಧ ಹೆಚ್‌ಡಿಕೆ ಗರಂ

ಸಿದ್ದರಾಮಯ್ಯ-ಹೆಚ್‌ಡಿಕೆ ಆರೋಪ-ಪ್ರತ್ಯಾರೋಪ ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ನಡುವೆ ‘60% ಕಮಿಷನ್’ ಆರೋಪ ಪ್ರತ್ಯಾರೋಪದ ಗಲಾಟೆ ಜೋರಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ (Congress Government) 60 ಪರ್ಸೆಂಟ್ ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ, ಹಿಂದಿನ ಬಿಜೆಪಿ ಸರ್ಕಾರವೇ ಚೆನ್ನಾಗಿತ್ತು ಅಂತ ಹೇಳುತ್ತಿದ್ದಾರೆ ಅಂತ ಹೆಚ್​ಡಿಕೆ (HDK) ಹೇಳಿದ್ದರು. ಇದಕ್ಕೆ ಗರಂ ಆಗಿದ್ದ ಸಿಎಂ ಸಿದ್ದರಾಮಯ್ಯ, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ, ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಅಂತ ಸವಾಲು ಹಾಕಿದ್ದರು. ಇದಕ್ಕೆ ಟ್ವೀಟ್ ಮೂಲಕ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. 60 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ ಅಂತ ಕುಮಾರಸ್ವಾಮಿ ಹೇಳಿದ್ದರು. ವಿಧಾನಸೌಧದಲ್ಲೇ ಮಂತ್ರಿಗಳಿಗೆ ಕಮಿಷನ್ ಹೋಗುತ್ತಿದೆ. ಪ್ರತಿ ಇಲಾಖೆಯಲ್ಲೂ ಸಚಿವರಿಗೆ ಮೊದಲು ಪರ್ಸೆಂಟೇಜ್ ಕೊಟ್ಟು ಆಮೇಲೆ ಹಣ ಬಿಡುಗಡೆ ಮಾಡುವ ಕೆಲಸ ಆಗುತ್ತಿದೆ ಅಂತ ಹೆಚ್‌ಡಿಕೆ ಗಂಭೀರ ಆರೋಪ ಮಾಡಿದ್ದರು. 60% ಕಮೀಶನ್!! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ @INCKarnataka ಪಕ್ಷದ ಮುಖಂಡರೇ ಮಾಡಿದ ಆರೋಪ. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ @BJP4Karnataka ಸರಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು!… pic.twitter.com/m8bTIxBVwo ಆರೋಪ ಸಾಬೀತು ಮಾಡಿ ಅಂತ ಸವಾಲು ಹಾಕಿದ್ದ ಸಿದ್ದರಾಮಯ್ಯ ಹೆಚ್‌ಡಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ಕುಮಾರಸ್ವಾಮಿಯವರ ಆರೋಪ ಗಾಳಿಯಲ್ಲಿ ಗುಂಡು ಹೊಡೆದಂತಿದೆ. ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಅಂತ ತಿರುಗೇಟು ಕೊಟ್ಟಿದ್ದರು. ಇದನ್ನೂ ಓದಿ: Contractors: ಬಾಕಿ ಬಿಲ್ ಪಾವತಿಸಿ, ಇಲ್ಲದಿದ್ರೆ ದಯಾಮರಣ ನೀಡಿ! ಗುತ್ತಿಗೆದಾರರಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ ಸಿದ್ದರಾಮಯ್ಯ ಸವಾಲಿಗೆ ಹೆಚ್‌ಡಿಕೆ ತಿರುಗೇಟು ಇನ್ನು ಸಿಎಂ ಸಿದ್ದರಾಮಯ್ಯ ಸವಾಲಿಗೆ ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 60% ಕಮಿಷನ್!! ಆಧಾರವಿಲ್ಲದೇ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿದ ಆರೋಪ. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಅಂತ ಹೆಚ್‌ಡಿಕೆ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಮೇಲಿನ 40% ಆರೋಪಕ್ಕೆ ಎಷ್ಟು ದಾಖಲೆ ಕೊಟ್ಟಿದ್ರಿ? ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ. ಕಮೀಶನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ಅಂತ ಹೆಚ್‌ಡಿಕೆ ಖಾರವಾಗಿ ಪ್ರಶ್ನಿಸಿದ್ದಾರೆ. ಬಾಕಿ ಹಣ ಕೊಡಿಸ್ತೀರಾ? ದಯಾಮರಣ ಕರುಣಿಸ್ತೀರಾ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮೀಶನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ. 60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!! ಅಂತ ಟ್ವಿಟರ್‌ನಲ್ಲೇ ಹೆಚ್‌ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.