NEWS

HD Kumaraswamy: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದ್ರಿ, ಸಚಿವೆ ಬೆಂಬಲಿಗರು ಹೇಗೆ ಬಂದ್ರು? ಕಲ್ಲು ಬಂಡೆಯ ಕುಮ್ಮಕ್ಕು ಇದೆಯಾ ಎಂದು HDK ಪ್ರಶ್ನೆ!

ಹೆಚ್‌ ಡಿ ಕುಮಾರಸ್ವಾಮಿ ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ (CT Ravi) ಮೇಲಿನ ಹಲ್ಲೆ ಯತ್ನ ಪ್ರಕರಣದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕಿಡಿ ಕಾರಿದ್ದಾರೆ. ಕರ್ನಾಟಕದಲ್ಲಿ (Karnataka) ಪ್ರಜಾಪ್ರಭುತ್ವ (Democracy) ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೆ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಎಕ್ಸ್​ ಪೋಸ್ಟ್​ನಲ್ಲಿ ಬರೆದಿದ್ದಾರೆ. ‘ಗೌರವಾನ್ವಿತ ಸಚಿವೆ ಬಗ್ಗೆ ಸಿ ಟಿ ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರ್ಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕೈ-ಕಮಲ ಜಟಾಪಟಿ; ಪ್ರತಿಭಟನಾಕಾರರ ಗಲಾಟೆ ವೇಳೆ ಪೊಲೀಸರಿಂದ ಲಾಠಿಚಾರ್ಜ್! ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕಾಂಗ್ರೆಸ್ ಸರ್ಕಾರ. ಗೇಟಿನಲ್ಲಿಯೇ ತಡೆದು ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ, ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರ್ಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿಟಿ ರವಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಭಾಪತಿ! ಸೋಮವಾರ ವರದಿ ರಿಲೀಸ್ ಎಂದ ಹೊರಟ್ಟಿ! ‘ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ’ ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್’ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ ಎಂದು ಆರೋಪಿಸಿದ್ದಾರೆ. ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ. ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ… pic.twitter.com/40oYfSJnFM ‘ಗೂಂಡಾಗಳ ಗ್ಯಾಂಗ್ ಲೀಡರ್ ಯಾರು?’ ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು. ಪೊಲೀಸರೇ, ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ ಟಿ ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಇತ್ತ ಜೆಡಿಎಸ್ ಪಕ್ಷ, ಡಿ ಕೆ ಶಿವಕುಮಾರ್ ಮಾತನಾಡಿದ ವಿಡಿಯೋ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ‘ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ ? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ?’ ಎಂದು ಪ್ರಶ್ನೆ ಮಾಡಿದೆ. ‘ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ. ರೌಡಿ ಕೊತ್ವಾಲ್‌ನ ಶಿಷ್ಯ ಡಿ ಕೆ ಶಿವಕುಮಾರ್ ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು. ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ? ರೌಡಿಯೋ?’ ಎಂದು ಖಾರವಾಗಿ ಪ್ರಶ್ನೆ ಮಾಡಿದೆ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.