NEWS

Darshan Gets Interim Bail: ಜಾಮೀನು ಸಿಕ್ಕರೂ ದರ್ಶನ್‌ಗೆ ಸಂಕಷ್ಟ! ನಟನಿಗೆ ಹೈಕೋರ್ಟ್‌ ವಿಧಿಸಿದ ಖಡಕ್ ಷರತ್ತುಗಳೇನು ಗೊತ್ತಾ?

ದರ್ಶನ್‌ಗೆ ಸಿಕ್ತು ಮಧ್ಯಂತರ ಜಾಮೀನು ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಪ್ರಕರಣದಲ್ಲಿ ಸುಮಾರು 131 ದಿನಗಳಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್‌ಗೆ (Actor Darshan) ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ದೀಪಾವಳಿ ಹಬ್ಬದ ಸಮಯದಲ್ಲೇ ತಮ್ಮ ನೆಚ್ಚಿನ ನಟನಿಗೆ ಮಧ್ಯಂತರ ಜಾಮೀನು ಸಿಕ್ಕಿರುವುದು ಫ್ಯಾನ್ಸ್‌ಗಳಿಗೆ ಭಾರೀ ಖುಷಿ ಕೊಟ್ಟಿದೆ. ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದು, ಸದ್ಯ ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ಭಾರೀ ಖುಷಿ ಕೊಟ್ಟಿದೆ. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸದ್ಯ ದರ್ಶನ್‌ಗೆ ಆರು ವಾರಗಳ ಕಾಲ ಮಧ್ಯಂತರ ರಿಲೀಫ್ ನೀಡಿದೆ. ಇದನ್ನೂ ಓದಿ: Dangerous Countries: ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳ ಪಟ್ಟಿ ಬಿಡುಗಡೆ! ಪಾಕಿಸ್ತಾನದ ಹೊಸ ಸ್ಥಾನ ನೋಡಿದ್ರೆ ಬೆಚ್ಚಿಬೀಳ್ತೀರಿ! ಸದ್ಯ ನಟ ದರ್ಶನ್‌ಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದರೂ ಸಹ ನೆಮ್ಮದಿಯಿಂದ ಇರುವಂತಿಲ್ಲ. ಯಾಕೆಂದರೆ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ಗೆ ಸದ್ಯ ತೀವ್ರ ಬೆನ್ನು ನೋವು ಸಮಸ್ಯೆ ಕಾಡುತ್ತಿದೆ. ಹೀಗಾಗಿ ಮಾನವೀಯತೆ ಆಧಾರದ ಮೇಲೆ ಚಿಕಿತ್ಸೆಗಾಗಿ ನ್ಯಾಯಾಲಯ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನಿಗೆ ಷರತ್ತುಗಳನ್ನು ಸಹ ಹಾಕಲಾಗಿದೆ. ಜಾಮೀನಿಗೆ ವಿಧಿಸಿದ ಷರತ್ತುಗಳಲ್ಲೇನಿದೆ? ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡುವ ವೇಳೆ ಹೈಕೋರ್ಟ್ ಷರತ್ತುಗಳನ್ನು ಸಹ ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು ಎಂದು ಉಲ್ಲೇಖಿಸಿ ಜಾಮೀನು ಮಂಜೂರು ಮಾಡಿದ್ದಾರೆ. ಹೀಗಾಗಿ ಇದು ದರ್ಶನ್‌ ಚಿಕಿತ್ಸೆಗಾಗಿ ನೀಡಿದ ಜಾಮೀನಾಗಿದೆ. ಹೀಗಾಗಿ ದರ್ಶನ್‌ ಜೈಲಿನಿಂದ ಹೊರಬಂದ ತಕ್ಷಣ ಆಸ್ಪತ್ರೆಗೆ ದಾಖಲಾಗಲಿದ್ದು, ಅಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಹೈಕೋರ್ಟ್ ಕೂಡ ಜಾಮೀನು ಸಿಕ್ಕ ಒಂದು ವಾರದಲ್ಲಿ ಚಿಕಿತ್ಸೆಯ ಬಗ್ಗೆ ವಿವರ ನೀಡುವಂತೆ ಸೂಚಿಸಿದೆ. ಇದರ ಜೊತೆಗೆ ಮುಖ್ಯವಾಗಿ ಪಾಸ್‌ಪೋರ್ಟ್ ಸರೆಂಡರ್ ಮಾಡುವಂತೆಯೂ ಹೈಕೋರ್ಟ್ ಸೂಚಿಸಿದೆ. ನಟ ದರ್ಶನ್ ವಿಚಾರಣಾಧೀನ ಕೈದಿ ಆಗಿರುವುದರಿಂದ ಮತ್ತು ಪ್ರಭಾವಿ ವ್ಯಕ್ತಿಯೂ ಆಗಿರುವುದರಿಂದ ವಿದೇಶಕ್ಕೆ ತೆರಳದಂತೆ ನಿರ್ಬಂಧಿಸಲು ನ್ಯಾಯಾಲಯ ಪಾಸ್‌ಪೋರ್ಟ್ ಸರೆಂಡರ್ ಮಾಡುವಂತೆ ಸೂಚಿಸಿದೆ. ಇದರ ಜೊತೆ ಪ್ರಯಾಣದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: Baba Vanga: ನಿಖರ ಭವಿಷ್ಯ ನುಡಿಯುವ ಬಾಬಾ ವಂಗಾ ಪ್ರಕಾರ 2043ರ ವೇಳೆಗೆ ಈ ದೇಶಗಳಲ್ಲಿ ಬರಲಿದೆ ಮುಸ್ಲಿಂ ಆಳ್ವಿಕೆ! ಮುಂದಿನ ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು, ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು ಎಂಬುವುದು ಮಾತ್ರವಲ್ಲದೇ, ಸಾಕ್ಷ್ಯಗಳ ನಾಶಕ್ಕೆ ಮುಂದಾಗಬಾರದು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ನ್ಯಾಯಾಲಯ ಸೂಚನೆ ಇಲ್ಲದೇ ವ್ಯಾಪ್ತಿ ಬಿಟ್ಟು ಹೊರಕ್ಕೆ ಹೋಗಬಾರದು ಎಂಬುದಾಗಿ ನಟ ದರ್ಶನ್​ಗೆ ಹೈಕೋರ್ಟ್ ಷರತ್ತುಗಳನ್ನು ವಿಧಿಸಿದೆ. ಸದ್ಯ ದರ್ಶನ್‌ ಇಚ್ಚಿಸಿದ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವಂತೆ ಹೈಕೋರ್ಟ್ ಆದೇಶಿಸಿದ್ದು, ಮೂಲಗಳ ಪ್ರಕಾರ ಇಂದು ಸಂಜೆಯ ಒಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.