NEWS

Moideen Bava Brother: ಮೊಯಿದ್ದೀನ್ ಬಾವಾ ಸಹೋದರನ ಮಿಸ್ಸಿಂಗ್ ಹಿಂದೆ ಮಹಿಳೆ ಕೈವಾಡ? ಇನ್ನೂ ಪತ್ತೆಯಾಗದ ಮುಮ್ತಾಜ್ ಅಲಿ ಸುಳಿವು!

ಮೋಯಿದ್ದೀನ್ ಬಾವಾ ಸಹೋದರ ಮಿಸ್ಸಿಂಗ್ ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು (Missing), ಮಂಗಳೂರಿನ (Mangalore) ಕುಳೂರಿನ ಸೇತುವೆ (Bridge) ಮೇಲೆ ಮುಮ್ತಾಜ್ (mumtaz) ಅವರ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿದ್ದು, ಈ ಕುರಿತು ಅವರ ಕುಟುಂಬಸ್ಥರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಅವರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ. ಈ ನಾಪತ್ತೆ ಪ್ರಕರಣದಲ್ಲಿ ಮಹಿಳೆ (Women) ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಮಹಿಳೆಯ ಕೈವಾಡ ಶಂಕೆ ಹೌದು, ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣದ ಹಿಂದೆ ಮಹಿಳೆಯ ಕೈವಾಡವಿದೆ ಎಂದು ಶಂಕೆ ವ್ಯಕ್ತವಾಗಿದೆ. ಮಹಿಳೆಯ ಬ್ಲಾಕ್‌ ಮೇಲ್ ಗೆ ಹೆದರಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಮಹಿಳೆಗೆ ಕೆಲವು ಪುರುಷರು ಕೂಡ ಸಹಾಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಮರ್ಯಾದೆಗೆ ಅಂಜಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಎಲ್ಲಾ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆ ಜೊತೆ ಮುಮ್ತಾಜ್ ಅಲಿ ಸಂಪರ್ಕ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಪೊಲೀಸರು, ಮುಮ್ತಾಜ್ ಆಲಿಗೆ ಮಹಿಳೆ ಜೊತೆ ಸಂಪರ್ಕ ಶಂಕೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಈಗಾಗಲೇ ಮಹಿಳೆಯ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೇರಳದಲ್ಲಿ ಮಹಿಳೆ ಲಾಸ್ಟ್ ಲೊಕೇಶನ್ ಮಹಿಳೆಯ ಲಾಸ್ಟ್ ಲೋಕೇಶನ್ ಕೇರಳದಲ್ಲಿ ಪತ್ತೆಯಾಗಿದ್ದು, ಬಳಿಕ ಮಹಿಳೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇನ್ನೊಂದೆಡೆ ಮೊಯಿದ್ದೀನ್ ಬಾವಾ ಸಹೋದರನಿಗಾಗಿ ನದಿಯಲ್ಲಿ ನಿರಂತರ ಹುಡುಕಾಟ ನಡೆಸಿದರೂ ಕೂಡ ಅವರು ಇನ್ನೂ ಪತ್ತೆಯಾಗಿಲ್ಲ. ಮುಮ್ತಾಜ್ ಸಿಕ್ಕ ಬಳಿಕ ಮಹಿಳೆಯನ್ನು ವಶಕ್ಕೆ ಪಡೆಯಲು ಪೊಲೀಸರ ತಂತ್ರ ರೂಪಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ 52 ವರ್ಷದ ಮುಮ್ತಾಜ್ ಅಲಿ BMW XY ಕಾರಿನಲ್ಲಿ ತೆಳೆಸಿದ್ದು, ಬ್ರಿಡ್ಜ್​ ಬಳಿ ಕಾರು ಪತ್ತೆಯಾಗುತ್ತಿದ್ದರಂತೆ ಸ್ಥಳದಲ್ಲಿ ಜನರ ಜಮಾವಣೆ ಮಾಡಿದ್ದಾರೆ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಡಿಸಿಪಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದಾರೆ. ನದಿಯಲ್ಲಿ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್, ಅಗ್ನಿಶಾಮಕದಳದಿಂದ ಹುಡುಕಾಟ ನಡೆಸಿದ್ದಾರೆ. ವಿವಿಧ ಉದ್ಯಮಿಗಳಲ್ಲಿ ತೊಡಗಿಸಿಕೊಂಡಿದ್ದ ಅಲಿ ಇಂದು ಬೆಳಗ್ಗೆ ಮೂರು ಗಂಟೆಗೆ ವೇಳೆಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟ್ಟಿದ್ದು, ಬೆಳಗ್ಗೆ 5 ಗಂಟೆಗೆ ಕುಳೂರು ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿತ್ತು. ಡ್ಯಾಮೇಜ್ ಆದ ಸ್ಥಿತಿಯಲ್ಲಿ ಮುಮ್ತಾಜ್ ಬಿಎಂಡಬ್ಲೂ ಕಾರು ಪತ್ತೆಯಾಗಿದೆ. ನಾಪತ್ತೆಯಾಗಿರುವ ಮಮ್ತಾಜ್ ಆಲಿ ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರಂತೆ. ಸ್ಥಳಕ್ಕೆ ಆಗಮಿಸಿದ ಕಮಿಷನರ್ ಎದುರು ಮೊಯಿದ್ದೀನ್ ಬಾವ ಕಣ್ಣೀರು ಹಾಕಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ. ಕಮಿಷನರ್ ಹೇಳಿದ್ದೇನು? ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ಮುಂಜಾನೆ ಮೂರು ಗಂಟೆಗೆ ಮನೆಯಲ್ಲಿ ಕೆಲ ಕಾರಣಗಳಿಂದ ಬಿಎಂಡಬ್ಲೂ ಕಾರ್ ಚಲಾಯಿಸಿ ಬಂದಿದ್ದರು. ಕುಳೂರು ಸೇತುವೆ ಯಲ್ಲಿ ಕಾರು ಅಪಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ, ಎಫ್ ಎಸ್ ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದಿಂದ ಕೆಲ ಮಾಹಿತಿಗಳು ಬಂದಿದೆ, ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. (ವರದಿ: ಕಿಶನ್ ಶೆಟ್ಟಿ, ನ್ಯೂಸ್ 18 ಕನ್ನಡ, ಮಂಗಳೂರು) None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.