NEWS

Yatnal: ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸಂಕಷ್ಟ! ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾಗಿರುವ ದಿನೇಶ್ ಗುಂಡೂರಾವ್ (Dinesh Gundu rao) ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (BJP MLA Basanagowda Patil Yatnal) ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ (Nonbailable Warrant) ಜಾರಿ ಮಾಡಲಾಗಿದೆ. ಸಚಿವ ದಿನೇಶ್‌ ಗುಂಡೂರಾವ್‌ ಪತ್ನಿ ಟಬು ರಾವ್(Tabu rav) ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌ 29 ರಂದು ಮಾನ್ಯ ಮಾಡಿದ್ದ ನ್ಯಾಯಾಲಯ ಶಾಸಕ ಯತ್ನಾಳ್‌ ಅಕ್ಟೋಬರ್‌ 16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಿತ್ತು. ಜಾಮೀನು ರಹಿತ ವಾರೆಂಟ್ ಆದ್ರೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ ಸದ್ಯ 42 ನೇ ಎಸಿಎಂಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಅವರು ಯತ್ನಾಳ್ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದೆ. ಅಕ್ಟೋಬರ್ 28ರ ಒಳಗೆ ವಾರೆಂಟ್ ಜಾರಿಗೆ ಆದೇಶ ಹೊರಡಿಸಿದ್ದಾರೆ. ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಅವರು ದೂರು ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಯಾವ ಕ್ಷಣದಲ್ಲಾದರೂ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಏನಿದು ಪ್ರಕರಣ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕ ಯತ್ನಾಳ್‌ ‘ದಿನೇಶ್‌ ಗುಂಡೂರಾವ್‌ ಮನೆಯಲ್ಲಿಅರ್ಧ ಪಾಕಿಸ್ತಾನ ಇದೆ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ತಬಸುಮ್‌ ಅವರು ಯತ್ನಾಳ್‌ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಮಾತ್ರವಲ್ಲ, ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯ ಖಾಸಗಿ ದೂರು ದಾಖಲಿಸಿದ್ದರು. ಕೆಳ ಮಟ್ಟದ ಹೇಳಿಕೆ! ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಹೇಳಿಕೆಯನ್ನು ಕೀಳು ಅಭಿರುಚಿ ಎಂದು ಹೇಳಿದರು. ಆ ಬಳಿಕ ಹೇಳಿಕೆ ನೀಡಿದ್ದಾರೋ ಇಲ್ವೋ ಎಂದು ಪ್ರಶ್ನೆ ಮಾಡಿದರು. ಯತ್ನಾಳ್‌ ಪರ ವಕೀಲರು ಹೌದು ಹೇಳಿಕೆ ನೀಡಿದ್ದಾರೆ ಎಂದು ಒಪ್ಪಿಕೊಂಡಿರು. “ಈ ರೀತಿಯ ಪದ ಬಳಕೆ ಸಮಾಜಕ್ಕೆ ಯಾವ ರೀತಿಯ ಹೇಳಿಕೆ ನೀಡುತ್ತದೆ. ವಯಕ್ತಿಕ ತೇಜೋವಧೆಗೆ ಯಾಕೆ ಇಳಿಯುತ್ತೀರಾ” ಎಂದು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದರು. (ವರದಿ: ಗಂಗಾಧರ ಅಂಜಿನಪ್ಪ, ನ್ಯೂಸ್18, ಕನ್ನಡ) None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.