ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ರೂಪಾಯಿ ವಂಚನೆ ಬೆಂಗಳೂರು: ಡಿ ಕೆ ಸುರೇಶ್ (DK Suresh) ತಂಗಿ (Sister) ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ (Gold) ಖರೀದಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡ ಐಶ್ವರ್ಯ ಗೌಡ (Aishwarya Gowda) ಎಂಬ ಮಹಿಳೆ ವಂಚನೆ ಮಾಡಿದ್ದಾರೆ. ಆರ್ ಆರ್ ನಗರ ನಿವಾಸಿ ಆಗಿರುವ ಐಶ್ವರ್ಯ ಗೌಡ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಐಶ್ವರ್ಯ ಗೌಡ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರು ದೂರು ನೀಡಿದ್ದಾರೆ. ಚಂದ್ರ ಲೇಔಟ್ ನಿವಾಸಿ ಆಗಿರುವ ವನಿತಾ ಐತಾಳ್ ಅವರು ಐಶ್ವರ್ಯ ಗೌಡ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ: ಅವಾಚ್ಯ ಪದ ಬಳಕೆ ಪ್ರಕರಣದಲ್ಲಿ ಸಿಟಿ ರವಿಗೆ ಮತ್ತಷ್ಟು ಸಂಕಷ್ಟ! ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ! ಹಣ ಕೇಳಿದಾಗ ಡಿ ಕೆ ಸುರೇಶ್ರಿಂದ ಕರೆ? ಐಶ್ವರ್ಯ ಗೌಡ 2023ರ ಅಕ್ಟೋಬರ್ನಿಂದ 2024 ಏಪ್ರಿಲ್ ವರೆಗೆ ಹಂತ ಹಂತವಾಗಿ ಚಿನ್ನ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಐಶ್ವರ್ಯಳನ್ನ ಹಣ ಕೇಳಿದಾಗ ಡಿ ಕೆ ಸುರೇಶ್ರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದಾರೆ ಎಂದು ಎಫ್ಐಆರ್ನಲ್ಲಿ ದಾಖಲಾಗಿದೆ. ಅಲ್ಲದೆ ಸಿನಿಮಾ ಧರ್ಮೇಂದ್ರ ಎಂಬುವವರಿಂದ ಕರೆ ಮಾಡಿಸಿ ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಎಕ್ಸ್ಪ್ರೆಸ್ವೇನಲ್ಲಿ ಪ್ರಯಾಣಿಸೋ ವಾಹನ ಸವಾರರೇ ಎಚ್ಚರ; ಕಾರಿಗೆ ಮೊಟ್ಟೆ ಹೊಡೆದು ಹಣ ದರೋಡೆ! ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ ಎಂದು ವಂಚನೆ ಐಶ್ವರ್ಯ ಗೌಡ ಅವರ ಪತಿ ಹರೀಶ್ ಕೆ.ಎನ್ ಕೂಡ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಡಿ ಕೆ ಸುರೇಶ್ ತಂಗಿ, ನನಗೆ ಅನೇಕ ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ. ನಾನು ದೊಡ್ಡ ಬ್ಯುಸಿನೆಸ್ ವುಮೆನ್. ನಿಮಗೆ ಒಳ್ಳೆ ವ್ಯಾಪಾರ ವಹಿವಾಟು ನೀಡುತ್ತೇನೆ ಎಂದೆಲ್ಲ ಹೇಳಿ ವನಿತಾ ಅವರನ್ನು ಐಶ್ವರ್ಯ ನಂಬಿಸಿದ್ದರು ಎನ್ನಲಾಗಿದೆ. ಸಧ್ಯ ಘಟನೆ ಬಗ್ಗೆ ಚಂದ್ರ ಲೇಔಟ್ನಲ್ಲಿರುವ ವಾರಾಹೀ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಅವರು ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವರ್ತೂರು ಪ್ರಕಾಶ್ ಮೇಲೂ ಇಂತದ್ದೇ ಆರೋಪ ಚಿನ್ನ ಖರೀದಿಸಿ ವಂಚಿಸಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ. ಗಣ್ಯರ ಹೆಸರ ಹೇಳಿಕೊಂಡು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಕೋಲಾರದ ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರು ಕೇಳಿ ಬಂದಿದೆ. 2.42 ಕೋಟಿ ವಂಚನೆ 2.945 ಕೆಜಿ ಚಿನ್ನ ಖರೀದಿಸಿ 2.42 ಕೋಟಿ ವಂಚಿಸಿದ ಆರೋಪದಲ್ಲಿ ಬಾಗಲಗುಂಟೆ ನಿವಾಸಿ ಶ್ವೇತಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಚಿನ್ನ, ಕಾರು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಅವಿನ್ಯೂ ರಸ್ತೆಯ ಜ್ಯುವೆಲ್ಲರಿ ಶಾಪ್ ನಲ್ಲಿ ಚಿನ್ನಾಭರಣ ಖರೀದಿಸಿ ಹಣ ನೀಡದೆ ವಂಚನೆ ಮಾಡಿರುವುದಾಗಿ ದೂರು ಬಂದ ಹಿನ್ನೆಲೆ ಎಸಿಪಿ ಗೀತಾ ನೇತೃತ್ವದ ತಂಡದಿಂದ ತನಿಖೆ ನಡೆಸಿದ್ದಾರೆ. ಇನ್ನೂ ಈಕೆ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಎಂದು ಹೇಳಿಕೊಂಡಿದ್ದಾಳೆ. ಚಿನ್ನದ ವ್ಯಾಪಾರಿ ಎಂದು ಹೇಳಿಕೊಂಡು ಸಗಟು ದರದಲ್ಲಿ ಆಭರಣ ಖರೀದಿಸಿ ವಂಚನೆ ಮಾಡಿದ್ದಾಳೆ. (ವರದಿ: ಮಂಜುನಾಥ್ ಸಿ, ನ್ಯೂಸ್ 18 ಕನ್ನಡ, ಬೆಂಗಳೂರು) None
Popular Tags:
Share This Post:
Chaithra Kundapur: ಚೈತ್ರಾ ಕಣ್ಣೀರಿಗೆ ದೊಡ್ಮನೆ ದೇವರು ಸ್ಪಂದಿಸಿದ್ರಾ? ಬಲಗಡೆಯಿಂದ ಹೂ ಬಿದ್ದೇ ಬಿಡ್ತು
December 24, 2024What’s New
Spotlight
Today’s Hot
CT Ravi Release: ಸಿ.ಟಿ. ರವಿ ರಿಲೀಸ್! ಹೈಕೋರ್ಟ್ ಆದೇಶದ ಬಳಿಕ ಬಿಡುಗಡೆ ಮಾಡಿದ ಪೊಲೀಸರು
- By Sarkai Info
- December 20, 2024
Featured News
Latest From This Week
Subscribe To Our Newsletter
No spam, notifications only about new products, updates.