ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ (Dr B R Ambedkar) ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು, ದಲಿತ, ರೈತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟದಿಂದ ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಬಂದ್ ಗೆ ಕರೆ ಕೊಟ್ಟಿವೆ. ದಲಿತ ಸಂಘಟನೆಗಳಿಂದ ಇಂದು ಮೈಸೂರು ಬಂದ್‌ಗೆ ಕರೆ ಅಂಬೇಡ್ಕರ್ ವಿರುದ್ಧ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂದು ದಲಿತ ಸಂಘಟನೆಗಳಿಂದ ಇಂದು ಮೈಸೂರು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಸಬರ್ಬನ್ ಬಸ್ ನಿಲ್ದಾಣದಲ್ಲಿ ಬಸ್ ತಡೆದು ದಲಿತ ಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಅಮಿತ್ ಶಾ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಜ್ಞಾನ ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಅಮಿತ್ ಶಾ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಮಿತ್ ಶಾ ಪ್ರತಿಕೃತಿ ಶವಯಾತ್ರೆ ಮಾಡಲಾಯಿತು. ಇದನ್ನೂ ಓದಿ: HMPV Virus: ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್! ILI, ಸಾರಿ ಕೇಸ್‌ಗಳ ಮೇಲೆ ಹದ್ದಿನಕಣ್ಣು ಅಮಿತ್ ಶಾ ಪ್ರತಿಕೃತಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಅಮಿತ್ ಶಾ ಪ್ರತಿಕೃತಿಗೆ ಬೆಂಕಿ ಹಚ್ಚಲು ಪೊಲೀಸರು ಬಿಡಲಿಲ್ಲ, ಆಗ ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೂ ಪ್ರತಿಭಟನಾಕಾರರು ಅಮಿತ್ ಶಾ ಪ್ರತಿಕೃತಿಗೆ ಬೆಂಕಿ ಹಚ್ಚಿದರು. ಬೆಂಕಿ ಹಚ್ಚಿದ ಪೊಲೀಸರು ತಕ್ಷಣ ನೀರು ಹಾಕಿ ಬೆಂಕಿ ಆರಿಸಿದರು. ಅಮಿತ್ ಶಾ ವಿರುದ್ಧ ಪ್ರತಿಭಟನಕಾರರು ಧಿಕ್ಕಾರ ಕೂಗಿದರು. ಮಂಡ್ಯದಲ್ಲೂ ಬಂದ್‌ಗೆ ಕರೆ ಇತ್ತ ಮಂಡ್ಯ ನಗರದಲ್ಲೂ ಅಮಿತ್ ಶಾ ಹೇಳಿಕೆ ವಿಚಾರವಾಗಿ ದಲಿತ ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ದಲಿತ, ರೈತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟದಿಂದ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: HMPV Virus: ಎಚ್ಚರ ಎಚ್ಚರ! 3 ಗಂಟೆ ಅವಧಿಯಲ್ಲಿ ಬೆಂಗಳೂರಿನ ಮತ್ತೊಂದು ಮಗುವಿನಲ್ಲಿ HMPV ವೈರಸ್ ಪತ್ತೆ! ಮಂಡ್ಯ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂಜಾಗ್ರತ ಕ್ರಮವಾಗಿ ಮಂಡ್ಯ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಂಜಯ ವೃತ್ತದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆವರೆಗೂ ಬಂದ್ ಮಾಡಲು ಮನವಿ ಮಾಡಲಾಗಿದೆ. ಸದ್ಯಕ್ಕೆ ಬಂದ್ ನ ಬಿಸಿ ಇಲ್ಲ ಸದ್ಯಕ್ಕೆ ಬಂದ್ ನ ಬಿಸಿ ಕಾಣಿಸುತ್ತಿಲ್ಲ. ಜನ ಸಂಚಾರ ಯಥಾಸ್ಥಿತಿ ಮುಂದುವರೆದಿದೆ. ಎಂದಿನಂತೆ ವ್ಯಾಪಾರ ವಹಿವಾಟು ಕೂಡ ಆರಂಭವಾಗಿದೆ, ಅದರಂತೆ ಮಂಡ್ಯದಿಂದ ಬೇರೆಡೆಗೆ ಸಾರಿಗೆ ಬಸ್ ಗಳು ತೆರಳುತ್ತಿವೆ. ಮಂಡ್ಯ ಬಂದ್‌ಗೆ ಜನರು ಕ್ಯಾರೆ ಎನ್ನುತ್ತಿಲ್ಲ. ಎಂದಿನಂತೆ ಅಂಗಡಿ ಮುಂಗಟ್ಟುಗಳು ಓಪನ್ ಆಗಿವೆ. ಪ್ರಗತಿಪರರು ಕರೆ ನೀಡಿದ್ದ ಬಂದ್ ವಿಫಲಗೊಳಿಸಲು ಬಿಜೆಪಿ ಪ್ಲಾನ್ ಮಾಡಿದ್ದು, ಕಾರ್ಯಕರ್ತರು ಅಂಗಡಿಗಳ ಮುಂದೆ ಹೋಗಿ ಅಂಬೇಡ್ಕರ್ ಫೋಟೋ ಹಿಡಿದು ಅಂಗಡಿಗಳನ್ನ ಓಪನ್ ಮಾಡಿಸಿದ್ದಾರೆ. ಮಂಡ್ಯದಲ್ಲಿ ಭಾಗಶಃ ಬಂದ್ ವಿಫಲವಾಗಿದೆ. None
Popular Tags:
Share This Post:
What’s New
Spotlight
Today’s Hot
-
- January 7, 2025
-
- January 7, 2025
-
- January 7, 2025
Featured News
Latest From This Week
Subscribe To Our Newsletter
No spam, notifications only about new products, updates.