NEWS

Valmiki Board Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರಗೆ ಜೈಲೇ ಗತಿ, ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ

ಬಿ. ನಾಗೇಂದ್ರ , ಮಾಜಿ ಸಚಿವ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಹಣ ಹಗರಣ (Valmiki Corporation Scam) ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ನಾಗೇಂದ್ರ ಜೈಲುಪಾಲಾಗಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ (Representative Court) ನಡೆದ ವಿಚಾರಣೆ ವೇಳೆ ವಾದ ವಿವಾದ ಆಲಿಸಿದ ನ್ಯಾಯಾಲಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ನಾಗೇಂದ್ರರನ್ನು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತು. ಇದನ್ನೂ ಓದಿ: Trending News: ಪಾಠ ಮಾಡೋ ಶಾಲೆಯಲ್ಲೇ ಹೆಡ್‌ ಮಾಸ್ಟರ್‌-ಶಿಕ್ಷಕಿಯ ಕಾಮದಾಟ! ರಾಸಲೀಲೆಯ ವಿಡಿಯೋ ವೈರಲ್! ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಜೈಲು ಪಾಲಾಗಿರುವ ನಾಗೇಂದ್ರ ಅವರನ್ನು ಇನ್ನು ಕೆಲವೇ ಕ್ಷಣಗಳಲ್ಲಿ ಅಧಿಕಾರಿಗಳು ಜೈಲಿಗೆ ಕರೆದೊಯ್ಯಲಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಡಿ ಅಧಿಕಾರಿಗಳು ಶಾಸಕ ನಾಗೇಂದ್ರರನ್ನು ಹಾಜರು ಪಡಿಸಿದ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಧೀಶರಾದ ನ್ಯಾ. ಸಂತೋಷ್ ಗಜಾನನ ಭಟ್ ಅವರು ಆಗಸ್ಟ್ 3ರ ತನಕ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದರು. ಈ ವೇಳೆ ನಾಗೇಂದ್ರ ಪರ ವಕೀಲರಾದ ಶ್ಯಾಮ್ ಸುಂದರ್ ಅವರು ಆರೋಪಿ ನಾಗೇಂದ್ರಗೆ ಜಾಮೀನು ಅರ್ಜಿ ಸಲ್ಲಿಸೋದಾಗಿ ಮನವಿ ಮಾಡಿದರು. ಈ ವೇಳೆ ಜಾಮೀನಿಗೆ ಅರ್ಜಿ ಸಲ್ಲಿಸಿ ಎಂದು ನ್ಯಾಯಾಧೀಶರು ಸೂಚಿಸಿದರು. ಈ ವೇಳೆ ನಾಗೇಂದ್ರ ಪರ ವಕೀಲ ಶ್ಯಾಮ್ ಸುಂದರ್ ಅವರು ನಾಗೇಂದ್ರಗೆ ಹೃದಯ ಸಂಬಂಧಿ‌ ಕಾಯಿಲೆ ಇರೋದ್ರಿಂದ ಚಿಕಿತ್ಸೆಗೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು. ಇದೇ ವೇಳೆ ಹಗರಣದಲ್ಲಿ ಪ್ರಮುಖ ಪಾತ್ರವಹಿಸಿರುವ ಆರೋಪಿ ಸತ್ಯನಾರಾಯಣ ವರ್ಮಾ ಕಸ್ಟಡಿ ಪಡೆಯಲು ಬಾಡಿ ವಾರೆಂಟ್‌ಗೆ ಇಡಿ ಅಧಿಕಾರಿಗಳು ಮನವಿ ಸಲ್ಲಿಸಿದ್ದು, ಹಣ ವರ್ಗಾವಣೆಯಲ್ಲಿ ಪ್ರಮುಖ‌ ಪಾತ್ರ ವಹಿಸಿದ್ದು, ವಿಚಾರಣೆ ಅವಶ್ಯಕತೆ ಇದೆ. ಹೀಗಾಗಿ ಕಸ್ಟಡಿಗೆ ನೀಡಬೇಕೆಂದು ಮನವಿ ಸಲ್ಲಿಸಿದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸತ್ಯನಾರಾಯಣ ವರ್ಮಾ ಇದ್ದು, ನಿನ್ನೆ ಪರಪ್ಪನ ಅಗ್ರಹಾರದಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಹಗರಣದಲ್ಲಿ ಪ್ರಮುಖ ಪಾತ್ರವಹಿಸಿರುವ ಆರೋಪಿ ಸತ್ಯನಾರಾಯಣ ವರ್ಮಾ ಎರಡು ದಿನದ ಹಿಂದೆ ಎಸ್ಐಟಿ ವಶದಲ್ಲಿದ್ದರು. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.