NEWS

Siddaramaiah: ನಾಳೆ 'ಲೋಕಾ' ವಿಚಾರಣೆ, ಇಂದು ಸಿಎಂ ಟೆಂಪಲ್ ರನ್! ತಾಯಮ್ಮ ದೇವಿ ಮೊರೆ ಹೋದ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಹಾವೇರಿ: ರಾಜ್ಯದಲ್ಲಿ ಮುಡಾ ಹಗರಣ (Muda Scam) ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿ ತನಿಖೆ (Investigation) ಚುರುಕುಗೊಂಡಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕಳಸಿದ್ದಾರೆ. ನೋಟಿಸ್‌ ಪಡೆದ ಬಳಿಕ ಸಿಎಂ ಪ್ರತಿಕ್ರಿಯೆ ನೀಡಿದ್ದು, ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ. ಇವುಗಳ ಮಧ್ಯೆ ದಿಢೀರ್‌ ಆಗಿ ಸಿಎಂ ಸಿದ್ದರಾಮಯ್ಯ ಟೆಂಪಲ್ ರನ್ ಮಾಡುತ್ತಿದ್ದಾರೆ. ಪ್ರಚಾರ ಕಾರ್ಯಕ್ರಮ ಬಿಟ್ಟು ಸಿಎಂ ದೇವಸ್ಥಾನ ಪ್ರದಕ್ಷಿಣೆ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ದೇವಸ್ಥಾನ ಭೇಟಿ ರಾಜಕೀಯ, ಉಪ ಚುನಾವಣೆ ಹಾಗೂ ಮುಡಾ ಹಗರಣ ಸಂಬಂಧ ಲೋಕಾಯುಕ್ತ ನೋಟಿಸ್ ಇವೆಲ್ಲವುದರ ನಡುವೆಯೂ ಸಿಎಂ ಸಿದ್ದರಾಮಯ್ಯ ಟೆಂಪಲ್‌ ರನ್‌ ಮಾಡುತ್ತಿದ್ದಾರೆ.ಶಿಗ್ಗಾಂವ ತಾಲೂಕಿನ ತಡಸಕ್ಕೆ ತೆರಳಿದ್ದ ಸಿಎಂ ತಡಸದ ತಾಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ತಾಯಮ್ಮ ದೇವಿಗೆ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ತಾಯಮ್ಮ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಿಎಂ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪ್ರಚಾರ ಬಿಟ್ಟು ಸಿಎಂ ದೇವಸ್ಥಾನ ಪ್ರದಕ್ಷಿಣೆ ಇಂದು ಮದ್ಯಾಹ್ನ 3 ಗಂಟೆಗೆ ಹಿರೇ ಬೆಂಡಿಗೇರಿಯಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು. ಆದರೆ ಪ್ರಚಾರ ಸಭೆ ಬಿಟ್ಟು ಸಿಎಂ ದೇವಸ್ಥಾನಕ್ಕೆ ಭೇಟಿ ಕೊಟ್ಟಿರುವುದು ಇದೀಗ ಅಚ್ಚರಿಗೆ ಕಾರಣವಾಗಿದೆ. ಇನ್ನು ನಾಳೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ ಎನ್ನಲಾಗುತ್ತಿದ್ದು, ದೇವಸ್ಥಾನ ಭೇಟಿ ನಂತರ ಮತ್ತೆ ಪ್ರಚಾರದ ಕಡೆ ಮುಖ ಮಾಡಿದ್ದಾರೆ. ಇದನ್ನೂ ಓದಿ: Lakshmi Hebbalkar: ‘ಬೆಂಗಳೂರು, ಉಡುಪಿಯಲ್ಲೂ ಲಕ್ಷ್ಮೀ ಹೆಬ್ಬಾಳ್ಕರ್ ಕಮೀಷನ್ ಅಂಗಡಿ!’ ಸಚಿವೆ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಆಗ್ರಹ ಮೈಸೂರಿಗೆ ನಾಳೆ ಸಿಎಂ ಆಗಮನ ನಾಳೆ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯಲಿದ್ದು, ನಾಳೆ ಸಿಎಂ ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಮುಡಾ‌ ಕಚೇರಿಗೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಡಿಸಿಪಿ‌ ಮುತ್ತುರಾಜ್ ಹಾಗು ಜಾಹ್ನವಿ ಸೇರಿ ಎಸಿಪಿಗಳಿಂದ ಪರಿಶೀಲನೆ ಕಾರ್ಯ ನಡೆದಿದೆ. ಇನ್ನು ಸಿಎಂ ಆಗಮನ ಹಿನ್ನೆಲೆ ಲೋಕಾಯುಕ್ತ ಕಚೇರಿ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್ ತಯಾರಿ ನಡೆಯುತ್ತಿದೆ. ಇದನ್ನೂ ಓದಿ: OYO Roomಗೆ ಗಂಡ-ಹೆಂಡತಿಯೂ ಬರುತ್ತಾರಂತೆ! ಇದಕ್ಕೆ ಅಸಲಿ ಕಾರಣ ಏನು ಗೊತ್ತಾ? ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್! ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ನವೆಂಬರ್ 6 ರಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರ್ ಆಗುವಂತೆ ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರಿಂದ ನೋಟಿಸ್ ಜಾರಿ ಮಾಡಲಾಗಿದೆ. ಮುಡಾ 50:50 ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ A2,A3,A4 ವಿಚಾರಣೆ ನಡೆಸಲಾಗಿದೆ. ಕಳೆದ ವಾರ A2 ಸಿಎಂ ಪತ್ನಿ ಪಾರ್ವತಿ ವಿಚಾರಣೆ ಮುಕ್ತಾಯಗೊಂಡಿದೆ. ಇದೀಗ A1 ಆರೋಪಿ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಲಾಗಿದೆ. ಖುದ್ದು ಲೋಕಾಯುಕ್ತ ಎದುರು ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ರಾಜಕೀಯ ಜೀವನದಲ್ಲೇ ಸಿಎಂಗೆ ಮೊದಲ ವಿಚಾರಣೆ ಈಗಾಗಲೇ ಲೋಕಾಯುಕ್ತ ಮುಡಾ ಹಗರಣಕ್ಕೆ ಸಂಬಂಧಿಸಿ ಎಲ್ಲಾ ಆರೋಪಿಗಳ ವಿಚಾರಣೆ ನಡೆಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯನವರ ಸರದಿ ಬಂದಿದೆ. ಇನ್ನು ಸಿದ್ದರಾಮಯ್ಯ ಅವರ ಜೀವನದ ಮೊದಲ ವಿಚಾರಣೆ ಇದಾಗಿದೆ. ಅವರು ಸುಮಾರ 40 ವರ್ಷಗಳಿಂದ ರಾಜಕಾರಣದಲ್ಲಿದ್ದು, ಯಾವುದೇ ರೀತಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸಿರಲಿಲ್ಲ. ಆದರೆ ಇದೀಗ ಸಿದ್ದರಾಮಯ್ಯನವರಿಗೆ ಮುಡಾ ಕಂಟಕ ಎದುರಾಗಿದ್ದು, ತಮ್ಮ 40 ವರ್ಷ ಸುದೀರ್ಘ ರಾಜಕಾರಣದಲ್ಲಿ ಇದೇ ಮೊದಲ ಬಾರಿಗೆ ಲೋಕಾಯುಕ್ತದ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. (ವರದಿ: ಶಿವರಾಂ ಅಸುಂಡಿ, ನ್ಯೂಸ್‌ 18 ಕನ್ನಡ, ಹಾವೇರಿ) None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.