NEWS

ಬೆಂಗಳೂರಿಗೆ ಗುಡ್​ನ್ಯೂಸ್​! BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಮೊದಲ ಬಾರಿಗೆ ತಲುಪಲಿದೆ ಕಾವೇರಿ ನೀರು

ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್​ ಪುಷ್ಪಾರ್ಚನೆ ಬೆಂಗಳೂರು: ಕಾವೇರಿ 5 ನೇ ಹಂತದ (Kaveri 5th stage) ಯೋಜನೆ ಪೂರ್ಣ ಗೊಂಡಿದ್ದು, ಕಾವೇರಿ 6 ನೇ ಹಂತದ (Kaveri 6th stage) ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಇದರೊಂದಿಗೆ ಬೆಂಗಳೂರಿನ (Bangalore) ಭವಿಷ್ಯದ ಬೆಳವಣಿಗಾಗಿ ನಗರದ ಮೂಲೆ ಮೂಲೆಗೂ ಕಾವೇರಿ ನೀರು ಹರಿಸಲು ಪಣ ತೊಟ್ಟಿರುವುದಾಗಿ ಮುಖ್ಯಮಂತ್ರಿ (Chief Minister) ಸಿದ್ದರಾಮಯ್ಯ (Siddaramaiah) ತಿಳಿಸಿದರು. ಮೊದಲ ಬಾರಿಗೆ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಸಮೃದ್ಧ ನೀರು ಒದಗಿಸುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ ಚಾಲನೆ ನೀಡಲಾಯಿತು. ಬೆಂಗಳೂರು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಜಲಮಂಡಳಿ ಆವರಣದಲ್ಲಿ ಆಯೋಜಿಸಿದ್ದ ಬೆಂಗಳೂರು ನಗರದ ಎಲ್ಲಾ ಪ್ರದೇಶಗಳಿಗೂ ಸಮರ್ಪಕ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾವೇರಿ 5 ನೇ ಹಂತದ ಕುಡಿಯುವ ನೀರು ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಾತನಾಡಿ, ಬೆಂಗಳೂರು ನಗರ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದು. ಈ ನಗರದ ಭವಿಷ್ಯದ ಬೆಳವಣಿಗೆಯನ್ನ ದೃಷ್ಟಿಯಲ್ಲಿಟ್ಟುಕೊಂಡು 10 ವರ್ಷಗಳ ಹಿಂದೆಯೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾವೇರಿ 5 ನೇ ಹಂತದ ಯೋಜನೆಯನ್ನು ರೂಪಿಸಲಾಗಿತ್ತು. ಈಗ ಈ ಯೋಜನೆಯನ್ನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಚಾಲನೆ ನೀಡಲಾಗಿದೆ ಎಂದರು. ಬೆಂಗಳೂರಿಗೆ ಬೇಕು, 2200 ಎಂ.ಎಲ್‌.ಡಿ ನೀರು ಸುಮಾರು 800 ಚದುರ ಕಿಲೋಮೀಟರ್‌ ವ್ಯಾಪ್ತಿಯನ್ನು ಹೊಂದಿರುವ ಬೃಹತ್‌ ಬೆಂಗಳೂರು ನಗರಕ್ಕೆ ಸಮರ್ಪಕ ನೀರು ಸರಬರಾಜು ಮಾಡಲು 2200 ಎಂ.ಎಲ್‌.ಡಿ ನೀರಿನ ಅಗತ್ಯವಿದ್ದು, ಇದುವರಗೂ ವಲ 1450 ಎಂ.ಎಲ್‌.ಡಿ ಯಷ್ಟು ನೀರು ಮಾತ್ರ ಇದೆ. ಇದೀಗ ಲೋಕಾರ್ಪಣೆಗೊಂಡಿರುವ 5ನೇ ಹಂತದಲ್ಲಿಯೇ 775 ಎಂ.ಎಲ್‌.ಡಿಯಷ್ಟು ನೀರು ನಮಗೆ ಲಭ್ಯವಾಗಲಿದ್ದು, 110 ಹಳ್ಳಿಗಳಿಗೆ ನೀರು ಪೂರೈಕೆಯಾಗಲಿದೆ. ಕಾವೇರಿ 6 ನೇ ಹಂತದ ಯೋಜನೆಯ ಮೂಲಕ 6 ಟಿಎಂಸಿ ಹೆಚ್ಚುವರಿ ನೀರು ನಗರಕ್ಕೆ ಹರಿಯಲಿದ್ದು, ಇದರೊಂದಿಗೆ ಬೆಂಗಳೂರು ನಗರದ ಮೂಲೆ ಮೂಲೆಗೂ ಸಮರ್ಪಕವಾಗಿ ಕಾವೇರಿ ತಾಯಿ ಬೆಂಗಳೂರಿಗರ ದಣಿವನ್ನು ತಣಿಸಲಿದ್ದಾಳೆ ಎಂದರು. ಇದನ್ನೂ ಓದಿ: `ಸೈಟ್’ ಸಿದ್ದಪ್ಪನವರೇ `ಮೂಡಾ’ಮರಿ ರಾಜೀನಾಮೆ ಕೊಟ್ಟಿದ್ದು ಯಾಕೆ ? ಸಿಎಂಗೆ ಜೆಡಿಎಸ್ ಲೇವಡಿ ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರನ್ನು ಒದಗಿಸಿದ್ದೇವೆ. ಆರನೇ ಹಂತದ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ ಎಂದರು. ಗ್ಯಾರಂಟಿ ಯೋಜನೆಗಳಿಗಾಗಿ 52 ಸಾವಿರ ಕೋಟಿ ನುಡಿದಂತೆ ನಡೆದ ಸರಕಾರ ನಮ್ಮದು ಎಂದ ಮುಖ್ಯಮಂತ್ರಿಗಳು, 10 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ನನಸು ಮಾಡಿದ್ದೇವೆ. ನಾವು ಏನು ಹೇಳುತ್ತೇವೋ ಅದನ್ನ ಈಡೇರಿಸುತ್ತೇವೆ. ಅಧಿಕಾರ ಬಂದಾಗಿನಿಂದ ಜಾರಿಯಾಗಿರುವ ಗ್ಯಾರಂಟಿ ಯೋಜನೆಗಳಿಗಾಗಿ 52 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟೀದ್ದೇವೆ. 1.20 ಲಕ್ಷ ಕೋಟಿ ಅಭಿವೃದ್ದಿಗಾಗಿ ಖರ್ಚು ಮಾಡುತ್ತಿದ್ದೇವೆ. ವಿರೋಧ ಪಕ್ಷಗಳು ಸರಕಾರದ ಬಳಿ ದುಡ್ಡಿಲ್ಲ ಎಂದು ಅಪಪ್ರಚಾರ ಮಾಡುತ್ತಿಯೆಷ್ಟೇ. ಕಾವೇರಿ 5 ನೇ ಹಂತದ ಯೋಜನೆ ಜಾರಿ ಅಭಿವೃದ್ದಿಯಲ್ಲವೇ ಎಂದು ಪ್ರಶ್ನಿಸಿದರು. 4336 ಕೋಟಿ ರೂ.ವೆಚ್ಚದಲ್ಲಿ ಯೋಜನೆ ಲೋಕಾರ್ಪಣೆ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು, ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು. ಜೊತೆಗೆ ಜೈಕಾ (ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ. ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.