ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಮರಣಮೃದಂಗ ಮುಂದುವರೆದಿದೆ. ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ಬಾಣಂತಿ ಸಾವಿಗೀಡಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾದಂತಾಗಿದೆ. ಬಾಣಂತಿಗೆ ಅಧಿಕ ರಕ್ತದೊತ್ತಡ, ಇನ್ಫೆಕ್ಷನ್, ಹೃದಯ ಸಂಬಂಧಿ ಸಮಸ್ಯೆ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಾಣಂತಿ ಸರಸ್ವತಿ (24) ನಿನ್ನೆ ಮೃತಪಟ್ಟಿದ್ದಾರೆ. ಇವರು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಜನವರಿ 2 ರಂದು ಸಿಜರಿನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ, ಇನ್ಫೆಕ್ಷನ್, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬಾಣಂತಿ ಸಾವನ್ನಪ್ಪಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ ಐದಕ್ಕೆ ಏರಿಕೆ ಇನ್ನು ಶಿಶುವಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರೆದಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸರಸ್ವತಿ ಸಾವಿನಿಂದ ಕುಟುಂಬ ಕಂಗಾಲಾಗಿದೆ. ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಹೊಸ ವರ್ಷದ ದಿನವೇ ಬಾಣಂತಿ ಶಿಶು ಸಾವಾಗಿತ್ತು ಹೊಸ ವರ್ಷದ ದಿನವೇ ಮಸೀದಾಪುರ ಗ್ರಾಮದ ಶಿವಲಿಂಗಮ್ಮ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಮಗು ಸಮೇತ ತಾಯಿಯೂ ರಿಮ್ಸ್ನಲ್ಲೇ ಸಾವನ್ನಪ್ಪಿದ್ದರು. ಈಕೆಯ ಪೋಷಕರು ಡಿಸ್ಚಾರ್ಜ್ ಮಾಡಿ ಬೇರೆಡೆ ಕರೆದೊಯ್ಯುತ್ತೇವೆ ಎಂದರೂ ರಿಮ್ಸ್ ಆಸ್ಪತ್ರೆ ವೈದ್ಯರು ಡಿಸ್ಚಾರ್ಜ್ ಮಾಡಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇದೇ ಕಾರಣಕ್ಕೆ ಆಕೆಯ ಸಾವಾಗಿತ್ತು. ಆಕೆಯ ಸಾವಿಗೆ ರಿಮ್ಸ್ ಆಸ್ಪತ್ರೆ ವೈದ್ಯರೇ ಕಾರಣ ಎಂದು ಶಿವಲಿಂಗಮ್ಮ ಕುಟುಂಬಸ್ಥರು ಆರೋಪ ಮಾಡಿದ್ದರು. ಅಕ್ಟೋಬರ್ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಾವು ಸಿಂಧನೂರು ತಾಲೂಕು ಆಸ್ಪತ್ರೆಗೆ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ನಾಲ್ವರು ಬಾಣಂತಿಯರು ಸಿಸೇರಿಯನ್ ಬಳಿಕ ಮೃತಪಟ್ಟಿದ್ದರು. ರಾಯಚೂರು ಜಿಲ್ಲೆಯವರೇಯಾದ ಮೌಸಂಬಿ ಮಂಡಲ್, ಚನ್ನಮ್ಮ, ಚಂದ್ರಕಲಾ, ರೇಣುಕಮ್ಮ ಮೃತ ಬಾಣಂತಿಯರು. ಈ ನಾಲ್ವರು ಬಾಣಂತಿಯರಿಗೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗಿದ್ದ IVದ್ರಾವಣವೇ ನೀಡಲಾಗಿತ್ತು ಎಂದು ಹೇಳಲಾಗಿದೆ. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಎಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ? ಬಳ್ಳಾರಿ, ರಾಯಚೂರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿನ ಬಾಣಂತಿಯರ ಸಾವಿನ ಸಂಖ್ಯೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಎಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ? ಇವರ ಸಾವಿಗೆ ಕಾರಣವೇನು? ಎಂಬುವುದರ ಕುರಿತು ಸಮಗ್ರವಾಗಿ ತನಿಖೆ ನಡೆಸುತ್ತಿದ್ದು, ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿದೆ. ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣನಾ? ಬಳ್ಳಾರಿಯಲ್ಲಿ ಐವರ ಬಾಣಂತಿಯರ ಸಾವು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿತ್ತು. ಐವರು ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂದು ತಿಳಿದುಬಂದಿದ್ದು, ಸರ್ಕಾರದ ನಿದ್ದೆಗೆಡಿಸಿತ್ತು. ಬಾಣಂತಿಯರ ಸಾವಿಗೆ ಕರ್ನಾಟಕ ಸರ್ಕಾರ ನೇರ ಹೊಣೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. IV ರಿಂಗರ್ ಲ್ಯಾಕ್ಟೇಟ್ ದ್ರಾವಣ ತಯಾರಿಸಿದ ಪಶ್ಚಿಮ ಬಂಗಾಳದ ಕಂಪನಿ ವಿರುದ್ಧ ಕರ್ನಾಟಕ ಸರ್ಕಾರ ಕಾನೂನು ಹೋರಾಟ ನಡೆಸುತ್ತಿದೆ. (ವರದಿ: ವಿಶ್ವನಾರ್ಥ ನ್ಯೂಸ್ 18 ಕನ್ನಡ, ರಾಯಚೂರು) None
Popular Tags:
Share This Post:
What’s New
Spotlight
Today’s Hot
-
- January 7, 2025
-
- January 7, 2025
-
- January 7, 2025
Featured News
Latest From This Week
Subscribe To Our Newsletter
No spam, notifications only about new products, updates.